ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ ಮಾಡಿದ ವೈದ್ಯೆ ಬಂಧನ! | ಜನತಾ ನ್ಯೂಸ್

01 Jun 2021
439
Bangalore

ಬೆಂಗಳೂರು : 2020ರ ಮೇ 29ರಂದು ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳುವಾಗಿತ್ತು. ಈ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಮನೋವೈದ್ಯೆ ಡಾ.ರಶ್ಮಿ (34) ಬಂಧಿತ ವೈದ್ಯೆಯಾಗಿದ್ದಾರೆ. ವಿಚಾರಣೆ ವೇಳೆ ನವಜಾತ ಶಿಶು ಅಪಹರಿಸಿದ್ದ ವೈದ್ಯೆ, ಮಗುವನ್ನು ರೂ.15 ಲಕ್ಷಕ್ಕೆ ಕೊಪ್ಪಳದ ದಂಪತಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.

ಬಾಗಲಕೋಟೆಯ ರೈತ ದಂಪತಿಗೆ ಕೆಲ ವರ್ಷಗಳ ಹಿಂದೆ ಬುದ್ಧಿಮಾಂದ್ಯ ಮಗು ಜನಿಸಿತ್ತು. ಮಗುವಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಪಾಲಕರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿ ಮನೋವೈದ್ಯೆಯಾಗಿದ್ದ ಡಾ.ರಶ್ಮಿ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದರು.

ಇನ್ನೊಂದು ಮಗುವಿಗೆ ಪ್ರಯತ್ನಪಟ್ಟರೂ ಮಗುವಾಗಿರಲಿಲ್ಲ ಎಂಬ ನೋವನ್ನು ದಂಪತಿ ರಶ್ಮಿ ಬಳಿ ಹೇಳಿಕೊಂಡಿದ್ದರು. ಹಣದ ಆಸೆಗೆ ಬಿದ್ದ ವೈದ್ಯೆ ಬಾಡಿಗೆ ತಾಯಿ ಮೂಲಕ ನಿಮ್ಮದೇ ಮಗು ಕೊಡಿಸುವುದಾಗಿ ನಂಬಿಸಿ ದಂಪತಿಯ ಅಂಡಾಣು ಮತ್ತು ವೀರ್ಯಾಣು ಪಡೆದಿದ್ದರು. ಅದನ್ನು ಬೇರೊಬ್ಬ ಮಹಿಳೆಯ ಗರ್ಭಕ್ಕೆ ಸೇರಿಸಿ ಮಗು ಬೆಳೆಸುವುದಾಗಿ ಹೇಳಿ 15 ಲಕ್ಷ ರೂ. ಪಡೆದಿದ್ದರು.

ಈ ಮಾತು ನಂಬಿದ್ದ ದಂಪತಿಗಳು, ವೈದ್ಯಗೆ ಹಣ ಕೊಡಲು ಸಮ್ಮತಿಸಿದ್ದಾರೆ. ಬಳಿಕ ಬಾಡಿಗೆ ತಾಯಿ ಹೊಟ್ಟೆಯಲ್ಲಿ ಮಗು ಗರ್ಭದರಿಸಿದೆ ಎಂದು ಆ ಪೋಷಕರಿಗೆ ವೈದ್ಯೆ ಸುಳ್ಳು ಹೇಳಿದ್ದಳು. ಹೀಗಿರುವಾಗ ಹುಬ್ಬಳ್ಳಿಯ ಆಸ್ಪತ್ರೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ ರಶ್ಮಿ, ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದರು.

ಆಗ ಅದೇ ಸಮಯದಲ್ಲಿಯೇ ಚಾಮರಾಜಪೇಟೆ ಬಿಬಿಎಂಪಿ ಆಸ್ಪತ್ರೆಯಲ್ಲಿ ಹುಸ್ನಾ ಬಾನು ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಸ್ಪತ್ರೆಗೆ ವೈದ್ಯೆಯಂತೆ ಬಂದಿದ್ದ ರಶ್ಮೀ ಮಗುವನ್ನು ಅಪಹರಿಸಿಕೊಂಡು ಹೋಗಿ ದಂಪತಿಗೆ ನೀಡಿದ್ದಾರೆ. ಶಿಶುವನ್ನು ವೈದ್ಯೆಯಿಂದ ಪಡೆದುಕೊಂಡಿದ್ದ ದಂಪತಿ ತಮ್ಮ ಮಗುವೆಂದೇ ಭಾವಿಸಿದ್ದರು. ಇದಕ್ಕೆ ಪ್ರತಿಯಾಗಿ ರೂ.15 ಲಕ್ಷ ಪಡೆದಿದ್ದರು ಎನ್ನಲಾಗಿದೆ.

ಇತ್ತ ಮಗು ಕಳವಾದ ಹಿನ್ನೆಲೆಯಲ್ಲಿ ಮಗುವಿಗಾಗಿ ಕುಟುಂಬಸ್ಥರು ಆಸ್ಪತ್ರೆಯಲ್ಲಿ ತೀವ್ರವಾಗಿ ಹುಡುಕಾಡಿದ್ದಾರೆ. ಬಳಿಕ ಹತಾಶರಾಗಿ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ.

ವರ್ಷವಾದರೂ ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ ಬೇಸರಗೊಂಡು ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶೀಘ್ರವೇ ಮಗು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸತತ ಪರಿಶೀಲನೆ ಹಾಗೂ ಟವರ್ ಲೊಕೇಶನ್ ಮೂಲಕ ಕಳೆದೊಂದು ವರ್ಷದಿಂದ ಪೊಲೀಸರು 35 ಸಾವಿರಕ್ಕೂ ಹೆಚ್ಚು ಮೊಬೈಲ್ ನಂಬರ್ ಟ್ರಾಯಕ್ ಮಾಡಿದ್ದರು.

ಶಿಶು ಅಪಹರಣವಾದ ದಿನ ರಶ್ಮಿ ತಮ್ಮ ಮೊಬೈಲ್​ನಲ್ಲಿ ಗೂಗಲ್ ಮೂಲಕ ಹಲವು ಹೆರಿಗೆ ಆಸ್ಪತ್ರೆಗಳ ಮಾಹಿತಿ ಕಲೆ ಹಾಕಿರುವ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ಇತ್ತೀಚೆಗೆ ಅವರ ಚಲನವಲನ ಪರಿಶೀಲಿಸಿ ಮೇ 29ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಇವರು ಕೊಟ್ಟ ಮಾಹಿತಿ ಆಧರಿಸಿ ಬಾಗಲಕೋಟೆಗೆ ತೆರಳಿದ ಪೊಲೀಸರು ದಂಪತಿಯನ್ನು ಪತ್ತೆಹಚ್ಚಿ ಅವರಿಗೆ ಮಾಹಿತಿ ನೀಡಿ ಮಗುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Bangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...