ನಕಲಿ ಪೊಲೀಸರಿಂದ ವೆಹಿಕಲ್ ಚೆಕ್ಕಿಂಗ್ ನೆಪದಲ್ಲಿ ಬೈಕ್ ರಾಬರಿ! | ಜನತಾ ನ್ಯೂಸ್

02 Jun 2021
457

ಬೆಂಗಳೂರು : ಪೊಲೀಸರ ಸೋಗಿನಲ್ಲಿ ವಾಹನ ತಪಾಸಣೆ ನಡೆಸಿದ ನಕಲಿ ಪೊಲೀಸಗಳು, ಬೈಕ್ ಪಡೆದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಬಿಸ್ವಾಸ್ ರಾಯ್ ಎಂಬುವರು ನೀಡಿದ ದೂರಿನ ಮೇರೆಗೆ ನಗರದ ನಿವಾಸಿಗಳಾದ ಶರತ್ ಶೆಟ್ಟಿ, ಪೂರ್ವಿಕ್ ರಾಜ್, ಮೋಹನ್ ಕುಮಾರ್ ಹಾಗೂ ತಪಸ್ ರಾಯ್ ಎಂಬುರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಎರಡು ಬೈಕ್ ಹಾಗೂ 41 ಸಾವಿರ‌ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಕೃತ್ಯದಲ್ಲಿ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಮೇ 25 ರಂದು ನೈಸ್ ರಸ್ತೆ ಕೊಮ್ಮಘಟ್ಟ ಮೇಲ್ಸೇತುವೆ ಬಳಿ ಬಿಸ್ವಾಸ್ ರಾಯ್ ಎಂಬುವರು ಬೈಕ್ ನಲ್ಲಿ ಹೋಗುವಾಗ ಪೊಲೀಸರ ಸೋಗಿನಲ್ಲಿ ಇವರ ವಾಹನ ತಡೆದು ಕೊರೊನಾ‌ ನಿಯಮ ಉಲ್ಲಂಘಿಸಿದ್ದೀರ ಎಂದು ಹೇಳಿ, ಬೈಕ್ ಜಪ್ತಿ‌ ಮಾಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಬಂದು ವಾಹನ ಬಿಡಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ. ಪೊಲೀಸರೆಂದು ನಂಬಿದ ರಾಯ್ ಬೈಕ್ ಬಿಟ್ಟು ಬಂದಿದ್ದಾರೆ.

ಮಾರನೇ ದಿನ ಠಾಣೆಗೆ ಹೋಗಿ ವಿಚಾರಿಸಿದಾಗ ವಿಷಯ ತಿಳಿದಿದೆ. ನಂತರ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದು ತನಿಖೆ ನಡೆಸಿ, ಸ್ಥಳದಲ್ಲಿ ಸೆರೆಯಾದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ, ಬಂಧನ ಮಾಡಲಾಗಿದೆ.

ಪ್ರಕರಣ ಆರೋಪಿಗಳ ಪೈಕಿ ಪಶ್ಚಿಮ ಬಂಗಾಳ ಮೂಲದ ಆರೋಪಿ ತಪಸ್ ರಾಯ್ ಎಂಬಾತ ದೂರುದಾರ ಬಿಸ್ವಾಸ್ ರಾಯ್ ಜೊತೆ ಬಾರ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಕೆಲಸ ಮಾಡಿ ಹಣ ನೀಡಲು ಮಾಲೀಕ ಸತಾಯಿಸುತ್ತಿದ್ದರಿಂದ ಆಕ್ರೋಶಗೊಂಡು ಸ್ನೇಹಿತರಿಗೆ ಸುಲಿಗೆ ಮಾಡುವ ಐಡಿಯಾ ಕೊಟ್ಟಿದ್ದ.

ಬಸವೇಶ್ವರ ನಿವಾಸಿ ಶರತ್ ಶೆಟ್ಟಿ ಸಿವಿಲ್ ಇಂಜಿನಿಯರ್, ಪೂರ್ವಿಕ್ ರಾಜ್‌ ನಾಲ್ಕನೇ ಸೆಮಿಸ್ಟರ್ ಇಂಜಿನಿಯರ್ ವಿದ್ಯಾರ್ಥಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಮೋಹನ್ ಕುಮಾರ್ ಕಂಪ್ಯೂಟರ್ ಆಪರೇಟರ್ ಆಗಿದ್ದಾನೆ.

RELATED TOPICS:
English summary :Bangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...