ತಂದೆ-ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ, ಮಕ್ಕಳ ಜೊತೆ ಸಂವಾದ: ಶಶಿಕಲಾ ಜೊಲ್ಲೆ | ಜನತಾ ನ್ಯೂಸ್

03 Jun 2021
402
Shashikala jolle

ಬೆಂಗಳೂರು : ಕೋವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು ದುಗುಡ, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ-ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿಮಾತು ಹೇಳಿದರು.

ಈ ಕುರಿತು ಮಾತನಾಡಿರುವ ಸಚಿವರು, ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ ಎಂದರು

ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಘೋಷಣೆ ಮಾಡಿರುವ ಮಾಸಿಕ 3,500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್ ಗೆ ತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

RELATED TOPICS:
English summary :Shashikala jolle

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...