Fri,Apr26,2024
ಕನ್ನಡ / English

ಒಂದು ವಾರ ಲಾಕ್​ಡೌನ್ ವಿಸ್ತರಿಸಿ, ತಲಾ 10 ಸಾವಿರ ರೂ. ಪರಿಹಾರ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂಸ್

03 Jun 2021
1534

ಬೆಂಗಳೂರು : ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೋನ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರದ ಆದಾಯ ತೆರಿಗೆ ಕುಗ್ಗಿತ್ತು. ಆದರೆ ಈ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯೊಂದರಲ್ಲೇ ಶೇ.150ರಷ್ಟು ಕಳೆದ ವರ್ಷಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ.

ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ. ಸರ್ಕಾರಕ್ಕೆ ನಿಜವಾದ ಕಾಳಜಿಯಿದ್ದರೆ ಸುಮಾರು ಒಂದು ಕೋಟಿ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ಕೊಡುವಂತೆ ಅವರು ಆಗ್ರಹಿಸಿದ್ದಾರೆ.

ರೈತರು, ಶ್ರಮಿಕ ವರ್ಗ, ಕಾರ್ಮಿಕರಿಗೆ ತಲಾ 10 ಸಾವಿರ ರೂಪಾಯಿ ಏಕರೂಪ ಪರಿಹಾರ ಘೋಷಣೆ ಮಾಡಿದರೆ, 10 ಸಾವಿರ ಕೋಟಿ ರೂಪಾಯಿಗಳ ಹೊರೆಯನ್ನು ಭರಿಸಬೇಕಾಗುತ್ತದೆ. ವರ್ಷಕ್ಕೆ ಲಕ್ಷಾಂತರ ಕೋಟಿಗಳ ಬಜೆಟ್ ಘೋಷಣೆ ಮಾಡುವ ರಾಜ್ಯ ಸರ್ಕಾರಕ್ಕೆ ಇದೇನು ಭರಿಸಲಾಗದ ಹೊರೆಯಾಗದು ಎಂದು ಸಲಹೆ ನೀಡಿದ್ದಾರೆ.

ಕೋವಿಡ್ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಹೆಚ್ ಡಿಕೆ ಹೇಳಿದ್ದಾರೆ.

ತೋರ್ಪಡಿಕೆಗೆ ಪರಿಹಾರ ಘೋಷಣೆ ಮಾಡುವುದನ್ನು ಬಿಟ್ಟು, ಧರ್ಮ ಸಂಕಟಕ್ಕೆ ಸಿಲುಕಿರುವ ಜನತೆಗೆ ಬದ್ಧತೆಯ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಪ್ಯಾಕೇಜ್ ಘೋಷಣೆ ಮಾಡುವಂತೆ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

RELATED TOPICS:
English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...