ಜೀವ ಉಳಿಸಿ ಎಂದು ಸರ್ಕಾರಕ್ಕೆ ಭಿಕ್ಷೆ ಬೇಡುತ್ತಿದ್ದೇವೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಜನರ ಜೀವ ಉಳಿಸಿ ಎಂದು ಸರ್ಕಾರಕ್ಕೆ ಭಿಕ್ಷೆ ಬೇಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಡಳಿತ ಸರ್ಕಾರಕ್ಕೆ ತಿಳಿಸಿದರು.
ಹಾಸನದ ಶ್ರೀನಗರ ಬಡಾವಣೆಯಲ್ಲಿ ಪುಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ.
ಆದರೆ ಗ್ರಾಮೀಣ ಭಾಗದ ಜನರಿಗೆ ಅದು ಗೊತ್ತಾಗುವುದಿಲ್ಲ. ಹಾಗಾಗಿ ನಮ್ಮ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದೆ. ಅದರಂತೆ ಗೊತ್ತಿಲ್ಲದವರು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಸರ್ಕಾರ ಆನ್ ಲೈನ್ ರಿಜಿಸ್ಟ್ರೇಷನ್ ನಿಲ್ಲಿಸಿದೆ ಎಂದು ದೂರಿದರು.
ಲಸಿಕೆ ಕೊಡಿಸಲು ಸರ್ಕಾರ ಸಹ ನಮಗೆ ಅನುಮತಿ ಕೊಟ್ಟಿಲ್ಲ. ಅನುಮತಿ ಕೊಟ್ಟರೆ ಎಲ್ಲರಿಗೂ ಉಚಿತವಾಗಿ ಹಂಚುತ್ತೇವೆ. ಈ ವಿಷಯದಲ್ಲಿ ರಾಜಕಾರಣ ಮಾಡ್ತಿಲ್ಲ. ನಾವು ಜನಕ್ಕೆ ಸೇವೆ ಮಾಡಲು ಹೊರಟಿದ್ದೇವೆ. ಜೀವ ಉಳಿಸಿ ಎಂದು ಸರ್ಕಾರಕ್ಕೆ ಭಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳಿದರು.
ಜನರ ಜೀವ ಉಳಿಯಬೇಕು. ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ. ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ನೀಡಿ ಎಲ್ಲರ ಜೀವ ಉಳಿಸಿ ಎಂದಿದ್ದಾರೆ.