ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ ಪಯಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | ಜನತಾ ನ್ಯೂಸ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.
ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಅವರು ಮಧ್ಯಾಹ್ನ ದಾವಣಗೆರೆಯಲ್ಲಿ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದ ವೇಳೆ ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಅವರಿದ್ದ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಲಭ್ಯವಾಗಲಿಲ್ಲ.
ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರನ್ನು ನಿಗದಿಯ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಭೇಟಿ ಮಾಡಲಿದ್ದಾರೆ.