ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? | ಜನತಾ ನ್ಯೂಸ್

05 Jun 2021
449
HD Kumaraswamy

ಬೆಂಗಳೂರು : ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರದ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು ಎಂದಿದ್ದಾರೆ.

ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿ ಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್‌ 19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶು ವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ ಎಂದು ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು.

ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು. ಗೋ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

RELATED TOPICS:
English summary :HD Kumaraswamy

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...