ಪಿಯು ಪರೀಕ್ಷೆ ರದ್ದುಗೊಂಡರೂ ಸಿಇಟಿ ನಡೆಯಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ | ಜನತಾ ನ್ಯೂಸ್

05 Jun 2021
410
Bangalore

ಬೆಂಗಳೂರು : ರಾಜ್ಯದಲ್ಲಿ ಪಿಯು ಪರೀಕ್ಷೆಗಳು ರದ್ದುಗೊಂಡರೂ ಸಿಇಟಿ ನಡೆಯಲಿದೆ. ಸಿಇಟಿ ಅಂಕ ಆಧರಿಸಿ ಮೆಡಿಕಲ್, ಇಂಜಿನಿಯರಿಂಗ್​, ಡೆಂಟಲ್ ಸೀಟ್​ಗಳನ್ನು ಹಂಚಲಾಗುವುದು.

ಸಿಇಟಿಯನ್ನು ಕೂಡ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬಹುದಿತ್ತು. ಆದರೆ ಸಿಇಟಿಯನ್ನೂ ರದ್ದುಗೊಳಿಸಿದರೆ ಮುಂದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಬ ಕಾರಣಕ್ಕೆ ಸಿಇಟಿ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಿಇಟಿ ಅಂಕ ಆಧರಿಸಿ ಮೆಡಿಕಲ್, ಇಂಜಿನಿಯರಿಂಗ್​, ಡೆಂಟಲ್ ಸೀಟ್​ಗಳನ್ನು ಹಂಚಲಾಗುತ್ತದೆ. ಸಿಇಟಿ ನಡೆಸದೆಯೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬಹುದಿತ್ತು. ಆದರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ ಎಂದು ಅಭಿಪ್ರಾಯಿಸಿದರು.

ಇನ್ನು "ಈಗಾಗಲೇ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಈ ಕಾರಣದಿಂದಾಗಿ ಮೆಡಿಕಲ್, ಎಂಜಿನಿಯರಿಂಗ್ ಸೀಟ್ ಪಡೆಯಲು ಪರೀಕ್ಷೆ ನಡೆಸುವುದು ಅತ್ಯವಶ್ಯಕವಾಗಿದೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು" ಎಂದು ಹೇಳಿದ್ದಾರೆ.

ಈ ಹಿಂದೆ ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಆಯ್ಕೆ ಮಾಡಲು ಕನಿಷ್ಠ ಅಂಕ ನಿಗದಿ ಮಾಡಲಾಗಿತ್ತು. ಆದರೆ ಈ ಬಾರಿ ಕನಿಷ್ಠ ಅಂಕ ನಿಗದಿಯಿಂದ ತೊಂದರೆ ಉಂಟಾಗುವುದು ಬೇಡ ಎಂಬ ದೃಷ್ಟಿಯಿಂದ ಸಿಇಟಿ ಅಂಕವನ್ನು ಮಾತ್ರ ಪರಿಗಣನೆ ಮಾಡಲು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಅವರ ಸಲಹೆ ಸರಿಯಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...