ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಲಸಿಕೆಗೆ ಕೇವಲ ರೂ.150(ಸೇವಾ ಶುಲ್ಕಕ್ಕೆ)ಮಾತ್ರ ಅವಕಾಶ: ಪ್ರಧಾನಿ ನರೇಂದ್ರ ಮೋದಿ ಘೋಷಣೆ | ಜನತಾ ನ್ಯೂಸ್

07 Jun 2021
537
PM Modi

ನವದೆಹಲಿ: : ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ಸೋಮವಾರ ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ, ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ನ ನಿಗದಿತ ಬೆಲೆಯ ಮೇಲೆ ಗರಿಷ್ಠ 150 ಸೇವಾ ಶುಲ್ಕ ವಿಧಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

ಕಳೆದ ಒಂದೂವರೆ ವರ್ಷಗಳಲ್ಲಿ ಕೋವಿಡ್​ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳಲ್ಲಿ ಬಹಳಷ್ಟು ಸುಧಾರಣೆಯಾಗಿದೆ. ಮೆಡಿಕಲ್​ ಆಕ್ಸಿಜನ್​​ನ ಇಷ್ಟೊಂದು ಕೊರತೆ ಎಂದು ಆಗಿರಲಿಲ್ಲ ಎಂದರು.​ ವಿಶ್ವದ ಅನೇಕ ದೇಶಗಳಂತೆ ಭಾರತವೂ ಸಂಕಷ್ಟ ಎದುರಿಸುತ್ತಿದೆ. ಭಾರತ ತನ್ನ ಶಕ್ತಿ ಮೀರಿ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿದೆ ಎಂದು ಪ್ರಧಾನಿ ಹೇಳಿದರು.

ಉಚಿತ ಲಸಿಕೆಯ ಬದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ಇಚ್ಛಿಸುವವರು ಅಲ್ಲೂ ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದರು. ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆ ಖರೀದಿಸಬಹುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ 150 ರೂಪಾಯಿ ಸೇವಾ ಶುಲ್ಕ ವಿಧಿಸಬಹುದಾಗಿದೆ. ಶೇ.75ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ ಎಂದು ಮೋದಿ ಪ್ರಕಟಿಸಿದರು.

ದೇಶದಲ್ಲಿ ಅತ್ಯಂತ ವೇಗವಾಗಿ ಲಸಿಕೆಗಳು ತಯಾರಾಗುತ್ತಿವೆ. ಇಡೀ ವಿಶ್ವವೇ ನಿಬ್ಬೆರಗಾಗುವಂತೆ ನಮ್ಮ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲಿನ ವಿಶ್ವಾಸದಿಂದ 2020ರ ಏಪ್ರಿಲ್ ನಲ್ಲಿ ಸಂಶೋಧನೆ ನಡೆಯುತ್ತಿದ್ದಾಗಲೇ ಲಾಜಿಸ್ಟಿಕ್ ಇತರ ತಯಾರಿ ಆರಂಭಿಸಿದ್ದೆವು. ಅದಕ್ಕಾಗಿ ಲಸಿಕಾ ಟಾಸ್ಕ್ ಫೋರ್ಸ್ ಕೂಡ ರಚಿಸಲಾಗಿತ್ತು. ಸಂಶೋಧನೆಗೆ ಅಗತ್ಯ ಹಣ ನೀಡಲಾಯಿತು ಎಂದರು.

ಈಗ ದೇಶದಲ್ಲಿ ಏಳು ಕಂಪನಿ ವಿಭಿನ್ನ ಪ್ರಕಾರದ ಲಸಿಕೆ ತಯಾರಿಸುತ್ತಿವೆ. 3 ಲಸಿಕೆ ಅಡ್ವಾನ್ಸ್ ಹಂತದಲ್ಲಿ ಪ್ರಯೋಗ ನಡೆಯುತ್ತಿದೆ. ಜೊತೆಗೆ, ಜನರಿಗೆ ಅಗತ್ಯ ಪ್ರಮಾಣದ ಬೇರೆ ದೇಶಗಳಿಂದ ಲಸಿಕೆ ಖರೀದಿಸುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.

ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹಾನಿಯಾಗಲಿದೆ ಎಂಬ ತಜ್ಞರ ಹೇಳಿಕೆಯಿಂದ ಜನರು ಆತಂಕಪಡುವ ಅಗತ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ಲಸಿಕೆ ತಯಾರಿಸಲಾಗುತ್ತಿದ್ದು, ಪ್ರಯೋಗದ ಹಂತದಲ್ಲಿವೆ. ಒಂದು ನೇಸಲ್ ಲಸಿಕೆ ಕುರಿತು ಸಂಶೋಧನೆ ನಡೆಯುತ್ತಿದೆ. ಇದು ಮೂಗಿನಲ್ಲಿ ಸ್ಪ್ರೇ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇದರಲ್ಲಿ ಸಫಲತೆ ದೊರೆತರೆ ಅದು ಲಸಿಕಾ ಅಭಿಯಾನಕ್ಕೆ ವೇಗ ನೀಡಲಿದೆ ಎಂದರು.

RELATED TOPICS:
English summary :PM Modi

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...