Wed,Apr24,2024
ಕನ್ನಡ / English

ಮಾಜಿ ಸಚಿವ, ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ | ಜನತಾ ನ್ಯೂಸ್

08 Jun 2021
1590

ಬೆಂಗಳೂರು : ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಹಾನಗಲ್‌ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ.ಉದಾಸಿ(85) ಅವರು ಇಂದು ಮಂಗಳವಾರ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದ ಕಾರಣ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ಅವರು ನಿಧನರಾದರು. ಉದಾಸಿ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಅವರಿಗೆ ವೆಂಟಿಲೇಟರ್ ಆಧಾರ ನೀಡಲಾಗಿತ್ತು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿ, ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ನಾಳೆ ಹಾನಗಲ್ ನಲ್ಲಿ ಅಗಲಿದ ನಾಯಕರ ಅಂತ್ಯಕ್ರಿಯೆ ನಡೆಯಲಿದೆ. ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ. ಪತ್ನಿ ನೀಲಮ್ಮ, ಪುತ್ರ ಸಂಸದ ಶಿವಕುಮಾರ ಉದಾಸಿ, ಪುತ್ರಿ ಜಯಶ್ರೀ ರನ್ನು ಅಗಲಿದ್ದಾರೆ.

ಹಾನಗಲ್‌ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದರು. ನಂತರ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಸಣ್ಣ ನೀರಾವರಿ ಹಾಗೂ ಜವಳಿ ಖಾತೆಗಳನ್ನು ನಿಭಾಯಿಸಿದ್ದರು. ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಜೆ.ಎಚ್‌. ಪಟೇಲ್‌, ಬಿ.ಎಸ್‌. ಯಡಿಯೂರಪ್ಪ ಅವರ ಸಂಪುಟ ಸಹೋದ್ಯೋಗಿಯಾಗಿ ಕಾರ್ಯ ನಿರ್ವಹಿಸಿದ್ದರು.

ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ 1983ರಿಂದ ನಿರಂತರವಾಗಿ 9 ಬಾರಿ ಸ್ಪರ್ಧಿಸಿ, 6 ಬಾರಿ ಜಯಗಳಿಸಿ, 3 ಬಾರಿ ಪರಾಭವಗೊಂಡಿದ್ದರು. ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ, ನಂತರ ಮೂರು ಬಾರಿ ಜನತಾದಳ, ಒಂದು ಬಾರಿ ಜೆಡಿಯು, ಒಂದು ಬಾರಿ ಕೆಜಿಪಿ ಹಾಗೂ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.

RELATED TOPICS:
English summary :Former min. Hanagal BJP MLA C.M.Udasi no more

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...