Sat,Apr27,2024
ಕನ್ನಡ / English

ರೋಹಿಣಿ ಸಿಂಧೂರಿ ಮನೆಯ ವಿದ್ಯುತ್​ ಬಿಲ್​ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ | ಜನತಾ ನ್ಯೂಸ್

09 Jun 2021
1307

ಮೈಸೂರು : ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶಾಸಕ ಸಾ.ರಾ.ಮಹೇಶ್ ಪತ್ರ ಬರೆದಿದ್ದು, 10 ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಮಹೇಶ್​, ದಿ ಗ್ರೇಟ್ ಸಿಂಗಂ, ದಕ್ಷ ಅಧಿಕಾರಿಯಂತೆ ರೋಹಿಣಿ ಸಿಂಧೂರಿ. ಅದೇನ್ ಸಿಂಗಂವೋ, ಸಿಂಗಳೀಕನೋ… ಅವರ ಮನೆಯ ಕರೆಂಟ್​ ಬಿಲ್​ ಒಂದು ತಿಂಗಳಿಗೆ 50 ಸಾವಿರ ರೂಪಾಯಿ! ಯಾವ ಮಂತ್ರಿ ಮನೆಗೂ ಇಷ್ಟು ಬಿಲ್ ಬರಲ್ಲ. 50 ಸಾವಿರ ರೂಪಾಯಿ ಒಬ್ಬ ಸೆಕೆಂಡ್ ಕ್ಲಾಸ್ ಅಧಿಕಾರಿಯ ವೇತನ ಎಂದು ಹರಿಹಾಯ್ದರು.

ನಿರ್ಗಮಿತ ಡಿಸಿ ಆರೋಪಿಸಿರುವಂತೆ ಮೈಸೂರಿನಲ್ಲಿ ನಡೆದಿರುವ ಭೂ ಹಗರಣಗಳ ಬಗ್ಗೆ ಸರ್ಕಾರ ತನಿಖೆ ಮಾಡಬೇಕು. ಅದಕ್ಕಾಗಿ ತನಿಖಾ ಸಮಿತಿ ರಚಿಸಿ. ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ ಸಂವೇದನಶೀಲತೆಯಿಲ್ಲದ ಅಧಿಕಾರಿ. ಒಬ್ಬ ಸಚಿವನಿಗೆ ಮನೆ ನವೀಕರಣಕ್ಕೆ 2 ಲಕ್ಷ ನೀಡಲಾಗುತ್ತದೆ. ಆದರೆ ಇವರು ಅಂದಾಜು 65 ಲಕ್ಷ ಖರ್ಚು ಮಾಡಿ ಡಿಸಿ ಸರ್ಕಾರಿ ನಿವಾಸ ನವೀಕರಣ ಮಾಡಿಸಿದ್ದಾರೆ. ಇದಕ್ಕೆ ಯಾರು ಅನುಮತಿ ನೀಡಿದರು ಎಂದು ಪ್ರಶ್ನಿಸಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದಂತೆ ಇದು. ಇವರು ಸೇವೆ ಮಾಡಲು ಅಲ್ಲ ಮೈಸೂರಿಗೆ ಬಂದಿದ್ದು ಎಂದರು.

ನಾನು ರೋಹಿಣಿ ಸಿಂಧೂರಿ ವಿರುದ್ಧ ಮಾಡಿದ ಆರೋಪಗಳನ್ನು ಒಳಗೊಂಡಂತೆ ಸಿಎಂಗೆ ಪತ್ರ ಬರೆದಿದ್ದೇನೆ. ಪಾರಂಪರಿಕ ಕಟ್ಟಡದ ಆವರಣದಲ್ಲಿ 16 ಲಕ್ಷ ರೂ. ಬಳಸಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ. ಈಜುಕೊಳಕ್ಕೆ ಕುಡಿಯುವ ನೀರನ್ನು ಬಳಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಮನೆಯಲ್ಲಿ ಮೂರು ಕೆಇಬಿ ಮೀಟರ್ ಇವೆ. ಬೇರೆಯವರಿಗೆ 3- 4 ಸಾವಿರ ರೂ. ಬಿಲ್ ಬರುತ್ತೆ, ಹೆಚ್ಚೆಂದರೆ 7 ಸಾವಿರ ಬರಬಹುದು. ಆದರೆ ಇವರ ಮನೆಯ ವಿದ್ಯುತ್​ ಬಿಲ್​ ಮಾತ್ರ 50 ಸಾವಿರ ರೂಪಾಯಿ ಎಂದರು.

ರೋಹಿಣಿ ಸಿಂಧೂರಿ ಬಗ್ಗೆ ಸಿನಿಮಾ ಮಾಡುತ್ತಿದ್ದಾರಂತೆ. ಅವರ ಬಗ್ಗೆ ಸಿನಿಮಾ ಮಾಡಲಿ. ಐಎಎಸ್ ಅಧಿಕಾರಿಯೊಬ್ಬರ ಸಾವಿನ ವಿಚಾರ ಸಿಬಿಐ ವರದಿ ಆಧರಿಸಿ ನಾವೂ ಸಿನಿಮಾ ತೆಗೆಯುತ್ತೇವೆ ಎಂದು ಸಾ.ರಾ. ಮಹೇಶ್​ ಹೇಳಿದರು.

ಎಲ್ಲ ಸಿನಿಮಾದಲ್ಲೂ ರಾಜಕಾರಣಿಗಳನ್ನು ಕೆಟ್ಟದಾಗಿ ತೋರಿಸಿ ಹೀಗಾಗಿದೆ. ಮೈಸೂರು ರಾಜಕಾರಣಿಗಳ್ಯಾರು ಮನುಷ್ಯರಲ್ಲವಾ? ಮೈಸೂರಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಪ್ರಾಮಾಣಿಕರಲ್ಲವಾ? ಮೈಸೂರು ರಾಜಕಾರಣಿಗಳ ಕಳಂಕದ ಬಗ್ಗೆ ತನಿಖೆ ಮಾಡಬೇಕು. ಇದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದರು.

RELATED TOPICS:
English summary :Rohini Sindhuri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...