Fri,Apr26,2024
ಕನ್ನಡ / English

ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? | ಜನತಾ ನ್ಯೂಸ್

09 Jun 2021
1323

ಬೆಂಗಳೂರು : ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲ್ಯಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ "ಸೋಕಾಲ್ಡ್‌ ಹುಲಿ, ಬಾಹುಬಲಿ" ಮುಂತಾದವರನ್ನುಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ. ಇನ್ನೊಂದೆಡೆ, "ಅನ್ನ ಹಳಸಿದೆ, *** ಕಾದಿದೆ" ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...