ವಿವಾಹವಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಎದುರು ಮನೆ ಯುವಕನಿಂದ ನಿರಂತರ ಅತ್ಯಾಚಾರ, ಯುವಕನ ಬಂಧನ! | ಜನತಾ ನ್ಯೂಸ್
ಮಂಡ್ಯ : 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಯುವಕನನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೆ.ಆರ್. ಪೇಟೆ ತಾಲ್ಲೂಕಿನ ಗ್ರಾಮವೊಂದರ ಲಕ್ಷ್ಮಣ ಎಂಬಾತ ಬಂಧಿತ ಆರೋಪಿ. ಆಟೊ ಚಾಲಕನಾಗಿದ್ದ ಈತ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಪ್ರೀತಿಯ ನಾಟಕವಾಡಿದ್ದ.
ಎದುರು ಮನೆಯ ಬಾಲಕಿಯನ್ನು ಆರಂಭದಲ್ಲಿ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಈ ವಿಚಾರವನ್ನ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮದುವೆ ಆಗುವುದಾಗಿ ನಿರಂತರ ಅತ್ಯಾಚಾರವೆಸಗಿದ್ದಾನೆ.
ಇತ್ತೀಚೆಗೆ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಹಾಗಾಗಿ ಪಾಲಕರು ಆಕೆಯನ್ನು ವೈದ್ಯರ ಬಳಿ ಕರೆದೊಯ್ದಿದ್ದು, ಸ್ಕ್ಯಾನಿಂಗ್ ಮಾಡಿಸಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಳಿಕ ಪೋಷಕರಿಗೆ ಅತ್ಯಾಚಾರ ಘಟನೆ ಬಾಲಕಿ ಹೇಳಿಕೊಂಡಿದ್ದಾಳೆ.
ಬಾಲಕಿಯ ಪೋಷಕರು ದೂರು ಸಲ್ಲಿಸಿದ್ದಾರೆ. ಬಂಧನದ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.