ದುರ್ಬಲ ಸಿಎಂ, ದುರ್ಬಲ ಹೈಕಮಾಂಡ್: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ | ಜನತಾ ನ್ಯೂಸ್

10 Jun 2021
420

ಬೆಂಗಳೂರು : ಸಿಎಂ ಯಡಿಯೂರಪ್ಪ ದುರ್ಬಲ ಮುಖ್ಯಮಂತ್ರಿ, ಬಿಜೆಪಿ ಹೈಕಮಾಂಡ್ ದುರ್ಬಲ ಹೈಕಮಾಂಡ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಬದಲಾವಣೆ ಚರ್ಚೆ ನಡೆಯುತ್ತಿದೆ. ಇದನ್ನು ನಾನು‌ ಮುಂಚೆಯೇ ಹೇಳಿದ್ದೆ. ಯೋಗೇಶ್ವರ್ ಮೇಲೇಕೆ ಕ್ರಮ ತೆಗೆದುಕೊಳ್ಳಲಿಲ್ಲ. ಯತ್ನಾಳ್ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ಅರುಣ್ ಸಿಂಗ್ ಹೇಳಿದಾಕ್ಷಣ ಅವರು ಯಾರೂ ಸುಮ್ಮನಾಗಲ್ಲ. ಬೆಂಕಿ ಇಲ್ಲದೆ ಯಾವ ಹೊಗೆಯೂ ಆಡಲ್ಲ ಎಂದರು.

ಯಡಿಯೂರಪ್ಪ ಅವರನ್ನು ಬದಲಿಸಿ ಎಂದು ನಾವ್ಯಾರೂ ಒತ್ತಾಯ ಮಾಡಿಲ್ಲ. ಆ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದಾದರೆ ಶಾಸಕರಾದ ಬಸನಗೌಡ ಯತ್ನಾಳ್, ಅರವಿಂದ ಬೆಲ್ಲದ್, ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಸಚಿವ ಯೋಗೇಶ್ವರ್ ವಿರುದ್ಧ ಬಿಜೆಪಿ ಹೈಕಮಾಂಡ್ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಎರಡೂ ದುರ್ಬಲ. ಅರುಣ್ ಸಿಂಗ್ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ಹಾಗಾದರೆ ಬದಲಾವಣೆ ಆಗಬೇಕು ಎಂದವರ ವಿರುದ್ಧ ಏಕೆ ಕ್ರಮವಿಲ್ಲ. ಇದರಿಂದ ರವಾನೆಯಾಗುವ ಸಂದೇಶ ಏನು? ಯಡಿಯೂರಪ್ಪ ಅವರೇ ಕಳಪೆ ಮುಖ್ಯಮಂತ್ರಿ. ಇನ್ನು ಬೇರೆಯವರು ಹೇಗಿರಬೇಕು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಮತ್ತೊಂದು ಕಡೆಯಲ್ಲಿ ಪೆಟ್ರೋಲ್,‌ಡೀಸೆಲ್ ಬೆಲೆಯನ್ನೂ ಹೆಚ್ಚಳ ಮಾಡುತ್ತಾ ಇದ್ದಾರೆ. ಗ್ಯಾಸ್ ಬೆಲೆ ಹೆಚ್ಚಿಸಿದ್ದಾರೆ. ಅಚ್ಚೇದಿನ್ ಆಯೇಗಾ ಅಂತಾರೆ, ಇದೇನಾ ಅಚ್ಚೇದಿನ್? ಎಂದು ಕಿಡಿಕಾರಿದರು.

ನಿರಂತರವಾಗಿ ತೈಲ ಬೆಲೆ ಏರಿಸುತ್ತಲೇ ಬರುತ್ತಿದ್ದಾರೆ. ಆನೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಇಷ್ಟೊಂದು ಬೆಲೆ ಯಾವ ಕಾಲದಲ್ಲೂ ಇರಲಿಲ್ಲ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ ಮಾಡುವಂತೆ ಎಐಸಿಸಿ ಸೂಚಿಸಿದೆ. ಶುಕ್ರವಾರದಿಂದ ಐದು ದಿನಗಳ ಕಾಲ ಧರಣಿ ಮಾಡುತ್ತೇವೆ. ಪೆಟ್ರೋಲ್ ಬಂಕ್ ಮುಂದೆ ನಾವು ಧರಣಿ ಮಾಡುತ್ತೇವೆ. ದೇಶಾದ್ಯಂತ ಈ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ತಿಳಿಸಿದರು.

RELATED TOPICS:
English summary :Siddaramaiah

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...