ಲಾಕ್ಡೌನ್​​ನಲ್ಲಿ ವಿಜಯೇಂದ್ರ ದೇವಸ್ಥಾನ ಭೇಟಿ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ | ಜನತಾ ನ್ಯೂಸ್

10 Jun 2021
402

ಬೆಂಗಳೂರು : ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಸಿಎಂ ಪುತ್ರ & ಕುಟುಂಬದವರು ಪೂಜೆ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವಿರುದ್ಧದ ಕೊರೊನಾ ರೂಲ್ಸ್​ ಬ್ರೇಕ್​ ಅರ್ಜಿ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ನಡೆಯಿತು.

ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ.

ಏಪ್ರಿಲ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರಂಭದಲ್ಲಿ ಜನತಾ ಕರ್ಫ್ಯೂ ಘೋಷಿಸಿ ನಂತರ ಲಾಕ್ ಡೌನ್ ವಿಧಿಸಿತು. ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಬೇರೆಲ್ಲದಕ್ಕೂ ಸರ್ಕಾರ ನಿರ್ಬಂಧ ವಿಧಿಸಿತು. ದೇವಾಲಯ ದರ್ಶನಕ್ಕೂ ಅವಕಾಶವಿಲ್ಲ.

ಈ ವೇಳೆ ಪ್ರತಿಕ್ರಿಯಿಸಿದ ಹೈಕೋರ್ಟ್ ಸಿಜೆ ಎ.ಎಸ್. ಒಕಾ.. ಆ ರಾಜಕಾರಣಿಯೇ ದೇವಾಲಯ ಪ್ರವೇಶ ಒಪ್ಪಿಕೊಂಡಿದ್ದಾರೆ. ನಿರ್ಬಂಧವಿದ್ದರೂ ದೇವಾಲಯ ಪ್ರವೇಶ ಸ್ಪಷ್ಟ ಉಲ್ಲಂಘನೆ. ಇದನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ದೇವಾಲಯ ತೆರೆದಿದ್ದರೆ ಜನಸಾಮಾನ್ಯ ಪ್ರವೇಶಿಸಬಹುದೇ. ರಾಜಕಾರಣಿಗಳಿಗೆ ಇರುವ ಸವಲತ್ತು ಜನರಿಗೂ ಇದೆಯೇ.? ಕೋವಿಡ್ ಮಾರ್ಗಸೂಚಿ ರಾಜಕಾರಣಿಗೆ ಅನ್ವಯವಾಗುವುದಿಲ್ಲವೇ.?

ಇದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಜಿಲ್ಲಾಧಿಕಾರಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಜಿ. ಆರ್. ಮೋಹನ್, ಪುತ್ತಿಗೆ ರಮೇಶ್ ಕೋರ್ಟ್​​ಗೆ ಪಿಐಎಲ್​ ಸಲ್ಲಿಸಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಇಂದು ಘಟನೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

RELATED TOPICS:
English summary :Bangalore

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...