ಮೈಸೂರು ಜಿಲ್ಲೆಯಲ್ಲಿ ಜೂ.14ರ ನಂತರ ಒಂದು ವಾರ ಲಾಕ್ಡೌನ್ ವಿಸ್ತರಣೆ: ಸೋಮಶೇಖರ್ | ಜನತಾ ನ್ಯೂಸ್
ಮೈಸೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ, ಮೈಸೂರು ಜಿಲ್ಲೆಯಾದ್ಯಂತ ಸೋಂಕು ಹರಡುವಿಕೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ.14 ರಿಂದ 21ರವರೆಗೆ ಲಾಕ್ಡೌನ್ ಮುಂದುವರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಜನಪ್ರತಿನಿಧಿಗಳ ಜೊತೆಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಶಾಸಕರು, ಸಂಸದರ ಜೊತೆ ಚರ್ಚಿಸಿ, ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜೂನ್ 14ರಂದು ಲಾಕ್ಡೌನ್ ಸ್ವರೂಪದ ಬಗ್ಗೆ ಮಾಹಿತಿ ನೀಡಲಾಗುವುದು" ಎಂದರು.
ಅನ್ಲಾಕ್ ಮಾಡಬೇಕಿದ್ದರೆ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕೆಂಬ ನಿಯಮವಿದೆ. ಆದರೆ ಸದ್ಯ ಮೈಸೂರಿನಲ್ಲಿಗ ಶೇ.20ರಷ್ಟು ಪಾಸಿಟಿವಿಟಿ ರೇಟ್ ಇದೆ. ಹೀಗಾಗಿ ಇದನ್ನು ಅತೀ ಶೀಘ್ರದಲ್ಲಿ ಶೇ.5ಕ್ಕೆ ಇಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ ಎಂದು ಸೂಚಿಸಿದರು.