11 ಜಿಲ್ಲೆ ಹೊರತುಪಡಿಸಿ ಉಳಿದೆಡೆ 14ರಿಂದ ಅನ್-ಲಾಕ್ ಪ್ರಕ್ರಿಯೆ ಆರಂಭ : ಸಂಪೂರ್ಣ ಮಾಹಿತಿ ಇಲ್ಲಿದೆ | ಜನತಾ ನ್ಯೂಸ್

10 Jun 2021
460

ಬೆಂಗಳೂರು : ರಾಜ್ಯದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಘೋಷಿಸಿದ್ದಾರೆ. ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರೆಸಿದರೆ, ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ.

ಇಂದು ಸಂಜೆ ನಡೆಸಿದ ಸಭೆಯ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ, ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಿರುವ ಜಿಲ್ಲೆಗಳಾದ, "ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ನಿಯಮಗಳು ಯಥಾಸ್ಥಿತಿ ಮುಂದುವರೆಯುತ್ತದೆ. ಅಲ್ಲದೇ, ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ, ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಪರಿಷ್ಕೃತ ನಿಯಮಗಳು ಜೂನ್ 14 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಆದರೆ, ಇದೇ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ಸ್ಥಗಿತವಾಗಿಯೇ ಇರಲಿದೆ, ಎಂದು ಸಿಎಂ ಹೇಳಿದ್ದಾರೆ.

o ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ.
o ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
o ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ; ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನೀಡಲಾಗಿದೆ.
o ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
o ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
o ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
o ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
o ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

RELATED TOPICS:
English summary :Unlock procedure statewide excluding 11 districts : The details are here

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...