Thu,May02,2024
ಕನ್ನಡ / English

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂಸ್

11 Jun 2021
1813

ಮಂಗಳೂರು : ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ಈ ನಡೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಗುರುವಾರ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, "ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ.

ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಳೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಳೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ.

2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ.

ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಳೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ.

ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ ಎಂದು ಹೇಳಿದ್ದಾರೆ.

RELATED TOPICS:
English summary :HD Kumaraswamy

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...