ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂಸ್

11 Jun 2021
454

ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಮೊದಲ ಪಿಯು ತರಗತಿಗಳ‌ ವಾರ್ಷಿಕ‌ ಪರೀಕ್ಷೆಗಳನ್ನು ರದ್ದು‌ ಮಾಡಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ‌ ತರಗತಿಗಳಿಗೆ ತೇರ್ಗಡೆ‌ ಮಾಡಿದೆ. ಅವರ ಕಲಿಕೆಯ ನಿರಂತರತೆ ಕಾಪಾಡುವ ಉದ್ದೇಶದಿಂದಷ್ಟೇ ಮೌಲ್ಯಮಾಪನವೆಂಬ ಔಪಚಾರಿಕ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮುಂದಿನ ವರ್ಷಗಳಲ್ಲಿ ಅವರು ವಿವಿಧ ಇಲಾಖೆ/ಸಂಸ್ಥೆಗಳ ವತಿಯಿಂದ ಪಡೆಯಬಹುದಾದ ವಿದ್ಯಾರ್ಥಿ ವೇತನ ಸೌಲಭ್ಯ ಸೇರಿದಂತೆ ಹಲವು ಸವಲತ್ತುಗಳನ್ನು ಪಡೆಯಲು ತೊಂದರೆಯಾಗದೇ ಇರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಮುಂದಿನ ತರಗತಿಗಳಿಗೆ ದಾಖಲಾತಿ ಪಡೆಯಲು ಅನುವು ಮಾಡಿಕೊಡುವ ಮೂಲಕ ಅವರ ಕಲಿಕೆಯ ನಿರಂತರತೆಯನ್ನು ಕಾಪಾಡುವ ಉದ್ದೇಶದಿಂದಷ್ಟೇ ಮೌಲ್ಯಮಾಪನವೆಂಬ ಔಪಚಾರಿಕ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಇಲಾಖೆಯು ಹೊರಡಿಸಿರುವ ಸುತ್ತೋಲೆಯ‌ ಆಶಯಗಳು ಸ್ಪಷ್ಟವಿವೆ. ಇದರಲ್ಲಿ ಪರೀಕ್ಷೆ ನಡೆಸುವ ಆಶಯ ಇಲ್ಲ. ಯಾವುದೇ ವಿದ್ಯಾರ್ಥಿಯು ಭೌತಿಕವಾಗಿ ಕಾಲೇಜಿಗೆ ಹಾಜರಾಗಬಾರದು. ಅಸೈನ್​​​ಮೆಂಟ್ ಗಳನ್ನು ವಾಟ್ಸ್​ಆ್ಯಪ್​​, ಇಮೇಲ್ ಅಲ್ಲದೇ ಅಂಚೆ ಮೂಲಕವೂ ವಿದ್ಯಾರ್ಥಿಗೆ ತಲುಪಿಸಬಹುದು.

ಮಾದರಿ ಪ್ರಶ್ನೆ ಪತ್ರಿಕೆಗಳು ಇಲಾಖೆಯ ವೆಬ್ ಸೈಟ್ ನಲ್ಲಿಯೂ ಲಭ್ಯವಿದೆ. ಇಲಾಖೆಯ ಡಾಟಾಬೇಸ್ ನಲ್ಲಿ ನಮೂದಾಗಿರುವ ವಿದ್ಯಾರ್ಥಿಗಳ‌ ಮೊಬೈಲ್ ಸಂಖ್ಯೆಗೆ ಪ್ರಶ್ನೆ ಪತ್ರಿಕೆಯ ಲಿಂಕ್ ಗಳನ್ನೂ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಮನೆಯಲ್ಲಿಯೇ ಕುಳಿತು ಅಸೈನ್​​ಮೆಂಟ್​​​ಗೆ ಉತ್ತರಗಳನ್ನು ಸಿದ್ಧಪಡಿಸಿದ ಬಳಿಕ, ವಿದ್ಯಾರ್ಥಿಗಳು ಅಂಚೆ, ವಾಟ್ಸ್​​ಆ್ಯಪ್​, ಇಮೇಲ್ ಹೀಗೆ ಯಾವ ಮಾದರಿಯಲ್ಲಿಯಾದರೂ ತಮ್ಮ‌ ಕಾಲೇಜಿಗೆ ಸಲ್ಲಿಸುವ ಕ್ರಮ ಅನುಸರಿಸಬಹುದಾಗಿದೆ.

ಕನಿಷ್ಠ ಅಂಕಗಳನ್ನು ನೀಡುವುದಲ್ಲದೇ ಉತ್ತರ ಪತ್ರಿಕೆಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸೂಕ್ತ ಮೌಲ್ಯಾಂಕನವನ್ನು ನೀಡಲು ಉಪನ್ಯಾಸಕರಿಗೆ ಸೂಚನೆ‌ ನೀಡಲಾಗಿದ್ದು, ಮಕ್ಕಳ ಭವಿಷ್ಯದ ದೃಷ್ಟಿಯಿಂದ‌‌ ಇದು ಅತ್ಯವಶ್ಯಕವಾಗಿದೆ ಎಂದಿದ್ದಾರೆ.

ಹಾಗಾಗಿ ಇದನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದಾಗಲೀ, ಪಾಸುಫೇಲು ಎಂದು ತಪ್ಪಾಗಿ ಅರ್ಥೈಸುವುದಾಗಲೀ ಮಾಡಬಾರದೆಂದು ಸಚಿವರು ಮನವಿ ಮಾಡಿದ್ದಾರೆ. ಉಪನ್ಯಾಸಕರು-ಪ್ರಾಂಶುಪಾಲರು ತಮ್ಮ ಜವಾಬ್ದಾರಿಯನ್ನು ಅರ್ಥೈಸಿಕೊಂಡು ತಮ್ಮ ವಿದ್ಯಾರ್ಥಿಗಳ ಒಳಿತಿಗಾಗಿ ಉದಾತ್ತವಾದ ಮನೋಭಾವದಿಂದ ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಕರೆ ನೀಡಿದ್ದಾರೆ.

RELATED TOPICS:
English summary :Suresh Kumar

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...