Fri,Apr26,2024
ಕನ್ನಡ / English

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂಸ್

12 Jun 2021
1911

ಬೆಂಗಳೂರು : ಖಾಸಗಿ ಶಾಲೆಗಳು ಕೆಲ ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಬಡ್ಡಿ ಹಣ ಪಡೆದು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡುವಂತೆ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ನೀಡಿದರೆ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಶಾಲೆಗಳು ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆ‌ನ್‌ಲೈನ್‌ ಕ್ಲಾಸ್‌ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್‌ ಮಾಡಿದ ಬಗ್ಗೆ ದೂರು ದಾಖಲಾದಲ್ಲಿ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಆನ್‌ಲೈನ್‌ ಕ್ಲಾಸ್ ಬಂದ್‌ ಮಾಡುವಂತ ಶಾಲೆಗಳ ವಿರುದ್ದ ಕ್ರಮಕ್ಕೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರೂ ಸೂಚಿಸಿದ್ದಾರೆ. ಅಲ್ಲದೇ, ಹೈಕೋರ್ಟ್‌, ಸುಪ್ರೀಂ ಕೋರ್ಟ್‌ನ ಸೂಚನೆ ಕೂಡಾ ಇದೆ ಎಂದು ತಿಳಿಸಿದ್ದಾರೆ.

ಕೋವಿಡ್‌ ಸಂಕಷ್ಟದ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಯವರು ಪೋಷಕರು ಹಾಗೂ ಲೇವಾದೇವಿದಾರರನ್ನು ಶಾಲೆಗೆ ಕರೆಸಿಕೊಂಡು ಸಾಲ ಕೊಡಿಸುತ್ತಿರುವುದು ಗೊತ್ತಾಗಿ ಮುಖ್ಯಮಂತ್ರಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಬೆಳವಣಿಗೆಗೆ ಅವಕಾಶ ಕೊಡುವುದಿಲ್ಲ. ಸಂಬಂಧಪಟ್ಟ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದರು.

ಪೋಷಕರ ಆರ್ಥಿಕ ಪರಿಸ್ಥಿತಿ ಹಾಗೂ ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಪಾವತಿಯಾಗದ ಸಂಗತಿ ತಿಳಿದಿದೆ. ಈ ಎರಡೂ ವಿಚಾರದಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಹಿಂದಿನ ವರ್ಷ ಸರ್ಕಾರ ಜಾರಿ ಮಾಡಿದ ಶೇ 70ರ ಶುಲ್ಕ ಪಾವತಿ ಅದೇಶ ಒಪ್ಪದ ಕೆಲ ಸಂಘಟನೆಯವರು ಮತ್ತು ಖಾಸಗಿ ಶಾಲೆಯವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ವರ್ಷವೂ ಇದೆ ಪರಿಸ್ಥಿತಿಯಿದೆ. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರೇ ಇದನ್ನು ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

ಶಾಲಾ ಶುಲ್ಕ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ ಬಂದ್‌ ಮಾಡಿರುವ ವಿಚಾರದ ಬಗ್ಗೆ ಪೋಷಕರು ಕೂಡಾ ದೂರು ಸಲ್ಲಿಸಬಹುದು. ನನಗೆ ಅಥವಾ ಶಾಲಾ ವ್ಯಾಪ್ತಿಯ ಬಿಇಓ ಗಳಿಗೆ ದೂರು ನೀಡಿದ್ದಲ್ಲಿ, ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮಕೈಗೊಳ್ಳ ಲಾಗುತ್ತದೆ ಎಂದಿದ್ದಾರೆ.

RELATED TOPICS:
English summary :Suresh Kumar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...