ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

12 Jun 2021
588

ನವದೆಹಲಿ : ಕ್ಲಬ್‌ಹೌಸ್ ಅಪ್ಲಿಕೇಶನ್‌ನಲ್ಲಿ ಪಾಕಿಸ್ತಾನ ಮೂಲದ ಪತ್ರಕರ್ತರೊಂದಿಗಿನ ಇತ್ತೀಚಿನ ಸಂಭಾಷಣೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರು ಆರ್ಟಿಕಲ್ 370ಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು "ಹಿಂತೆಗೆದುಕೊಳ್ಳುವ" ಕುರಿತು ಆಶ್ವಾಸನೆ ನೀಡಿದ್ದು ಹೊಸ ವಿವಾದಕ್ಕೆ ನಾಂದಿಹಾಡಿದೆ.

ಪ್ರಸ್ತುತ ಜರ್ಮನಿಯಲ್ಲಿ ನೆಲೆಸಿರುವ ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್ ಜಿಲಾನಿ ಅವರ ಪ್ರಶ್ನೆಗೆ ದಿಗ್ವಿಜಯ ಸಿಂಗ್ ಪ್ರತಿಕ್ರಿಯಿಸುತ್ತಿದ್ದರು. ಒಮ್ಮೆ ಈ ಸರ್ಕಾರ ಹೋಗಿ, ಭಾರತ ಪ್ರಧಾನಿ ಮೋದಿಯವರಿಂದ ಬಿಡುಗಡೆ ಹೊಂದಿದಲ್ಲಿ, ಸರ್ಕಾರ ಬದಲಾವಣೆಯಾದರೆ ಕಾಶ್ಮೀರ ವಿಷಯದಲ್ಲಿ ಏನು ಮಾಡಬಹುದು, ಮಾಡಲಾಗುತ್ತದೆ? ಎಂಬ ಪ್ರಶ್ನೆಗೆ ಕಾಂಗ್ರೆಸ್ ಮುಖಂಡ ಉತ್ತರಿಸುತ್ತಿದ್ದಾರೆ.

ಚರ್ಚೆಯಲ್ಲಿ ಈ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತರಲ್ಲಿ ಒಬ್ಬರಾದ ದಿಗ್ವಿಜಯ ಸಿಂಗ್, “ಅವರು(ಬಿಜೆಪಿ) 370ನೇ ವಿಧಿಯನ್ನು ಹಿಂತೆಗೆದುಕೊಂಡಾಗ ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ, ಅವರು ಎಲ್ಲರನ್ನೂ ಕಂಬಿಯ ಹಿಂದೆ ಹಾಕಿದ್ದರಿಂದ "ಇನ್ಸಾನಿಯತ್" ಇರಲಿಲ್ಲ. ಏತನ್ಮಧ್ಯೆ, "ಕಾಶ್ಮೀರಿಯತ್" ಜಾತ್ಯತೀತತೆಯ ಮೂಲಭೂತ ವಿಷಯ. ಏಕೆಂದರೆ ಮುಸ್ಲಿಂ ಬಹುಸಂಖ್ಯಾತ ರಾಜ್ಯದಲ್ಲಿ ಹಿಂದೂ ರಾಜನಿದ್ದನು ಮತ್ತು ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರು. ವಾಸ್ತವವಾಗಿ, ಕಾಶ್ಮೀರದಲ್ಲಿ ಸರ್ಕಾರಿ ಸೇವೆಗಳಲ್ಲಿ ಮೀಸಲಾತಿಯನ್ನು ಕಾಶ್ಮೀರಿ ಪಂಡಿತರಿಗೆ ನೀಡಲಾಗಿತ್ತು. ಆದ್ದರಿಂದ, 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಮತ್ತು ಜೆ ಅಂಡ್ ಕೆ ರಾಜ್ಯದ ಸ್ಥಾನಮಾನವನ್ನು ಕಡಿಮೆ ಮಾಡುವ ನಿರ್ಧಾರವು ದುಃಖದ ನಿರ್ಧಾರವಾಗಿದೆ. ಮತ್ತು ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಗಮನಹರಿಸಬೇಕಾಗುತ್ತದೆ," ಎಂದು ಹೇಳಿದ್ದಾರೆ.

370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು 2019 ರ ಆಗಸ್ಟ್ 5 ರಂದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಯೋಜಿಸುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ.

ಏತನ್ಮಧ್ಯೆ, ಬಿಜೆಪಿ ವಿರೋಧ ಪಕ್ಷದ ನಾಯಕ ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಬಿಜೆಪಿಯ ಮುಖಂಡ ಅಮಿತ್ ಮಾಲ್ವಿಯಾ, "ಪಾಕಿಸ್ತಾನ ಬಯಸಿದ್ದು ಇದನ್ನೇ..." ಎಂದು ಹೇಳಿದ್ದಾರೆ.

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಶಾಂಡಿಲ್ಯ ಗಿರಿರಾಜ್ ಸಿಂಗ್ ಆವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್ಸಿನ ಮೊದಲ ಪ್ರೀತಿ ಪಾಕಿಸ್ತಾನ. ದಿಗ್ವಿಜಯ್ ಸಿಂಗ್ ಅವರು ರಾಹುಲ್ ಗಾಂಧಿಯವರ ಸಂದೇಶವನ್ನು ಪಾಕಿಸ್ತಾನಕ್ಕೆ ತಲುಪಿಸಿದ್ದಾರೆ. ಕಾಶ್ಮೀರವನ್ನು ಪಡೆಯಲು ಕಾಂಗ್ರೆಸ್ ಪಾಕಿಸ್ತಾನಕ್ಕೆ ಸಹಾಯ ಮಾಡಲಿದೆ”, ಎಂದು ಟೀಕಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಭಾರತದ ಚಿತ್ರಣವನ್ನು ನಾಶಮಾಡಲು ಮತ್ತು ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಲು ಪಾಕಿಸ್ತಾನ ಮತ್ತು ಕಾಂಗ್ರೆಸ್ ಒಂದೇ ಆಲೋಚನೆಯನ್ನು ಹೊಂದಿವೆ. 370ನೇ ವಿಧಿಗಾಗಿ ದಿಗ್ವಿಜಯ್ ಸಿಂಗ್ ಏನು ಹೇಳಿದ್ದನೋ, ಅದು ಪಾಕಿಸ್ತಾನದ ಅಂತರರಾಷ್ಟ್ರೀಯ ಕಾರ್ಯಸೂಚಿಯಾಗಿದೆ", ಎಂದು ಖಾರವಾಗಿ ಹೇಳಿದ್ದಾರೆ.

RELATED TOPICS:
English summary :Cong leader Digvijay Singh assures on revoking article 370 matter to Pak journalist

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...