Tue,Apr23,2024
ಕನ್ನಡ / English

ಇಂದು ಮುಂಜಾನೆ 3.34ಕ್ಕೆ ಸಂಚಾರಿ ವಿಜಯ್​ ನಿಧನ, ವೈದ್ಯರ ಘೋಷಣೆ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ | ಜನತಾ ನ್ಯೂಸ್

15 Jun 2021
1770

ಬೆಂಗಳೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ಸ್ಯಾಂಡಲ್​ವುಡ್​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ನಿಧನರಾದರು.

ಜೂ.12ರ ರಾತ್ರಿ​ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಕೋಮಾಗೆ ತಲುಪಿದ್ದ ವಿಜಯ್​ ಅವರ ಬ್ರೈನ್​ ಡೆತ್​ಗೆ ಆಗಿದೆ ಎಂದು ಸೋಮವಾರ ರಾತ್ರಿ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡಿತ್ತು. ಅಂಗಾಗ ದಾನ ಪ್ರಕ್ರಿಯೆ ಮುಗಿದ ಬಳಿಕ ಡೆತ್ ಡಿಕ್ಲೆರೇಷನ್ ಮಾಡಲಾಗಿದೆ.

ಸರ್ಕಾರದ ಕಡೆಯಿಂದಲೇ ನಟ ಸಂಚಾರಿ ವಿಜಯ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 8ರಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ, ಬಳಿಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಟ್ಟೂರು ಪಂಚನಹಳ್ಳಿಯಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​ ನಟರು, ರಂಗಭೂಮಿ ಕಲಾವಿದರು,ಸಂಚಾರಿ ವಿಜಯ್​ ಅವರ ಅಭಿಮಾನಿಗಳು ಸೇರಿದಂತೆ ನೂರಾರು ಮಂದಿ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಇಡೀ ಕುಟುಂಬಕ್ಕೆ ಆಧಾರವಾಗಿದ್ದ ವಿಜಯ್​​ ಅವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

janata

ಇನ್ನು ಅಂತಿಮ ದರ್ಶನ ಬಳಿಕ ವಿಜಯ್​ ಪಾರ್ಥಿವ ಶರೀರ ಅವರ ಸ್ವಗ್ರಾಮ ಕಡೂರಿನ ಪಂಚೇನಹಳ್ಳಿಗೆ ರವಾನೆಯಾಗಲಿದ್ದು, ಸಂಜೆ ವೇಳೆಗೆ ವಿಜಯ್​ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈಗಾಗಲೇ ಪಂಚೇನಹಳ್ಳಿಯಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ರಂಗಪ್ಪ ಹೋಗ್ಬಿಟ್ನಾ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಸಂಚಾರಿ ವಿಜಯ್​, 24ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. "ನಾನು ಅವನಲ್ಲ ಅವಳು" ಚಿತ್ರದ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದರು. ಇದೇ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಕೂಡ ಒಲಿದಿತ್ತು. ನಟರಾದ ವಾಸುದೇವರಾವ್, ಚಾರುಹಾಸನ್​ ಬಳಿಕ ರಾಷ್ಟ್ರಪ್ರಶಸ್ತಿ ಪಡೆದ ಹೆಮ್ಮೆ ಇವರದ್ದು.

janata

RELATED TOPICS:
English summary :Sandalwood

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...