Sat,Apr20,2024
ಕನ್ನಡ / English

ಭೂಮಿ ಖರೀದಿಯಲ್ಲಿ ಅವ್ಯವಹಾರ, ರಾಮಮಂದಿರಕ್ಕೆ ಜನ ಕೊಟ್ಟಿರುವ ದೇಣಿಗೆಯನ್ನು ಹಿಂದಿರುಗಿಸಬೇಕು: ಡಿ.ಕೆ.ಶಿವಕುಮಾರ್‌ ಒತ್ತಾಯ | ಜನತಾ ನ್ಯೂಸ್

15 Jun 2021
2120

ಮಂಡ್ಯ : ರಾಮ ಮಂದಿರ ನಿರ್ಮಾಣಕ್ಕಾಗಿ ಹಳ್ಳಿ, ಹಳ್ಳಿಗಳಲ್ಲಿ ಜನ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಹೀಗಿರುವಾಗ ಇವರು ಭೂಮಿ ಖರೀದಿಯಲ್ಲಿ ಅವ್ಯವಹಾರ ಮಾಡಿ ದ್ರೋಹ ಬಗೆದಿದ್ದಾರೆ. ಇದನ್ನು ಇಡೀ ದೇಶ ಖಂಡಿಸಬೇಕು. ಜನ ಕೊಟ್ಟಿರುವ ದೇಣಿಗೆಯನ್ನು ಹಿಂದಿರುಗಿಸಬೇಕು. ಈ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಿ, ಶಿಕ್ಷೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೊಮವಾರ ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಯಲಿಯೂರು ಸರ್ಕಲ್‌ನ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು.

ಕಳೊಂದು ವರ್ಷದಿಂದ 51 ಬಾರಿ ಪೆಟ್ರೋಲ್‌ ಬೆಲೆ ಹೆಚ್ಚಳ ಮಾಡಲಾಗಿದೆ. ತಿಂಗಳಿಂದೀಚೆಗೆ 17 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಅಮೆರಿಕದಂತಹ ದೇಶದಲ್ಲೂ ಪೆಟ್ರೋಲ್‌ ಬೆಲೆ ಕಡಿಮೆ ಇದೆ. ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದಲ್ಲೂ ಕಡಿಮೆ ಬೆಲೆ ಇದೆ. ಆದರೆ ನಮ್ಮ ದೇಶದಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಹಣ ಲೂಟಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಬಡವರ ಜೇಬನ್ನು ಪಿಕ್‌ ಪ್ಯಾಕೇಟ್‌ ಮಾಡುತ್ತಿದೆ ಎಂದು ಆರೋಪಿಸಿದರು.

ಇಂಧನ ಬೆಲೆ ಏರಿಕೆ ಮಾಡುವವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಏಕೆ ಮಾಡಲಿಲ್ಲವೆಂದು ಪ್ರಶ್ನಿಸಿದ ಡಿಕೆಶಿ, ಸರ್ಕಾರಿ ನೌಕರರ ಸಂಬಳವನ್ನೂ ಏರಿಕೆ ಮಾಡಬೇಕಿತ್ತು. ಜನರ ಹಣವನ್ನು ಈ ರೀತಿ ಲೂಟಿ ಮಾಡುವ ಪ್ರಯತ್ನಕ್ಕೆ ಕೈ ಹಾಕಬಾರದು ಎಂದು ಟೀಕಿಸಿದರು.

ರಾಮ ಮಂದಿರ ನಿರ್ಮಾಣದ ಭೂಮಿ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಇದು ಇಡೀ ದೇಶ ಹಾಗೂ ಜನರ ಭಾವನೆಗೆ ಮಾಡಿರುವ ಅಪಮಾನ. ಈ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

RELATED TOPICS:
English summary :DKShivakumar

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...