ಕೋವಿಡ್ ಪರಿಹಾರ ಕಾರ್ಯ ಮೇಲ್ವಿಚಾರಣೆಗೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ | ಜನತಾ ನ್ಯೂಸ್
ಬೆಂಗಳೂರು : ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಕೋವಿಡ್ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಲು ತಾವು ಬಂದಿರುವುದಾಗಿ ಹೇಳಿದ್ದಾರೆ.
ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯಬುಸ್ತುವಾರಿ ಅರುಣ್ ಸಿಂಗ್ ಶ್ಲಾಘಿಸಿದರು.
ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ತಾಕೀತು ಮಾಡಿದರು.
RELATED TOPICS:
English summary :ArunSingh