Thu,Apr25,2024
ಕನ್ನಡ / English

ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳ ಎಲ್ಲಾ ಸಿಬ್ಬಂದಿಗೂ ಪರಿಹಾರ ಘೋಷಿಸಿ | ಜನತಾ ನ್ಯೂಸ್

16 Jun 2021
1228

ಬೆಂಗಳೂರು : ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೆ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗೂ ಪರಿಹಾರ ಘೋಷಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ರಾಜ್ಯದ ಜನರಿಗೆ ಸರ್ಕಾರ ಬಿಡಿಗಾಸಿನ ಪರಿಹಾರದ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಸೇರಿಸಿದ್ದಾರೆ. ಈ ಪ್ಯಾಕೇಜ್‍ನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ ಎಂದು ತಿಳಿಸಲಾಗಿದೆ. ಆದರೆ ಈ ಪ್ಯಾಕೇಜ್ ಘೋಷಿಸುವಾಗ ಸರ್ಕಾರ ಖಾಸಗಿ ಅನುದಾನಿತ ಶಾಲೆಗಳ ಖಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೈ ಬಿಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕೊರೊನಾ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ರಾಜ್ಯದ ಜನರಿಗೆ ಸರ್ಕಾರ ಬಿಡಿಗಾಸಿನ ಪರಿಹಾರದ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಸೇರಿಸಿದ್ದಾರೆ. ಈ ಪ್ಯಾಕೇಜ್‍ನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ ಎಂದು ತಿಳಿಸಲಾಗಿದೆ. ಆದರೆ ಈ ಪ್ಯಾಕೇಜ್ ಘೋಷಿಸುವಾಗ ಸರ್ಕಾರ ಖಾಸಗಿ ಅನುದಾನಿತ ಶಾಲೆಗಳ ಖಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೈ ಬಿಟ್ಟಿದೆ ಎಂದಿದ್ದಾರೆ.

ಅನುದಾನಿತ ಶಾಲೆ-ಕಾಲೇಜುಗಳಲ್ಲೂ 3-5 ಸಾವಿರ ರೂಪಾಯಿ ಮಾತ್ರ ಪಡೆದು ಕೆಲಸ ಮಾಡುವ ಸಾಕಷ್ಟು ಮಂದಿ ಅತಿಥಿ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಇದ್ದಾರೆ. ಬಹು ದೊಡ್ಡ ಸಂಖ್ಯೆಯಲ್ಲಿರುವ ಇವರನ್ನು ಸರ್ಕಾರದ ಪ್ಯಾಕೇಜ್‍ನಲ್ಲಿ ಸೇರಿಸದಿರುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ.

ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ಅತಿಥಿ ಶಿಕ್ಷಕರು ಬೀದಿ ಬದಿ ತರಕಾರಿ, ಹೂ, ಹಣ್ಣು ಮಾರಾಟ ಮಾಡುತ್ತಿರುವುದು, ನರೇಗಾ ಕೂಲಿ ಕೆಲಸಕ್ಕೆ ಹೋಗಿರುವ ಅಸಂಖ್ಯಾತ ಪ್ರಕರಣಗಳನ್ನು ಹಾಗೂ ಸಂಕಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಮಾಧ್ಯಮಗಳು ವರದಿ ಮಾಡಿವೆ. ಸಾಮಾಜಿಕ ತಾಣಗಳಲ್ಲಿ ಇವರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಇಷ್ಟಾದರೂ ಸರ್ಕಾರ ಅವರ ಕಡೆಗೆ ಗಮನ ಹರಿಸದಿರುವುದು ಅಕ್ಷಮ್ಯ ಸಂಗತಿ

ಮಕ್ಕಳಿಗೆ ಪಾಠ ಮಾಡುವ ಈ ಸಿಬ್ಬಂದಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲಾಗದ ಸ್ಥಿತಿಯಲ್ಲಿ ಇದ್ದಾರೆ. ಸರ್ಕಾರದ ಪ್ಯಾಕೇಜ್‍ನಲ್ಲಿ ಖಾಸಗಿ ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪರಿಹಾರ ಘೋಷಿಸಿಲ್ಲ. ಅವರಿಗೂ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು ಅಥವಾ ಅರ್ಜಿ ಕರೆದು ಭಿಕ್ಷೆಯಂತೆ ಒಂದೆರಡು ಸಾವಿರ ನೀಡುವ ಬದಲಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಈ ಸಿಬ್ಬಂದಿ ವಿವರಗಳನ್ನು ಪಡೆದು ನೇರವಾಗಿ ಅವರ ಖಾತೆಗಳಿಗೆ ಪರಿಹಾರದ ಹಣ ವರ್ಗಾಯಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

RELATED TOPICS:
English summary :Siddaramaiah

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...