ಪ್ರಿಯತಮನಿಗಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಂಜಿನಿಯರಿಂಗ್ ಪದವಿಧರೆ! | ಜನತಾ ನ್ಯೂಸ್

16 Jun 2021
398

ಬೆಂಗಳೂರು : ಯತಮನಿಗಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಂಧ್ರ ಪ್ರದೇಶ ಮೂಲದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶ ಮೂಲದ ಶ್ರೀಕಾಕುಳಂನ ನಿವಾಸಿ ರೇಣುಕಾ(25) ಬಂಧಿತ ಆರೋಪಿತೆ.

ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಆಕೆ ಗಾಂಜಾ ಪೂರೈಕೆ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಆಂಧ್ರಪ್ರದೇಶ ಮೂಲದ ರೇಣುಕಾ ಹೆಸರಿನ ಯುವತಿ ಚೆನ್ನೈನಲ್ಲಿ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಾಗ ಸಿದ್ಧಾರ್ಥ್​ ಹೆಸರಿನ ಯುವಕನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ವಿಚಾರದಲ್ಲಿ ಮನೆಯವರೊಂದಿಗೆ ಜಗಳ ಆಡಿದ ರೇಣುಕಾ ಸಿದ್ಧಾರ್ಥ್​ ಮಾತಿಗೆ ಮರುಳಾಗಿದ್ದಳು. ಅದಾದ ಮೇಲೆ ಬೆಂಗಳೂರಿಗೆ ಬಂದಿದ್ದ ಸಿದ್ದಾರ್ಥ್​ ಗಾಂಜಾ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ. ಹೊಸ ಬಿಜಿನೆಸ್ ಸ್ಟಾರ್ಟ್ ಮಾಡಿದ್ದೇನೆ, ಒಳ್ಳೆಯ ಲಾಭವಿದೆ, ನೀನೂ ಬಂದು ನನ್ನ ಜತೆ ಕೈ ಜೋಡಿಸು ಎಂದು ರೇಣುಕಾಳಿಗೆ ಬ್ರೈನ್ ವಾಶ್ ಮಾಡಿದ್ದ.

ರೇಣುಕಾ ಬೆಂಗಳೂರಿಗೆ ಬಂದು ಸಿದ್ಧಾರ್ಥ್​ ಜತೆ ಗಾಂಜಾ ಮಾರಾಟಕ್ಕೆ ಇಳಿದಿದ್ದಳು. ಸಿದ್ಧಾರ್ಥ್​ ಗಾಂಜಾ ತರಿಸಿಕೊಂಡು ಕಸ್ಟಮರ್ ಹುಡುಕುತ್ತಿದ್ದ. ನಂತರ ರೇಣುಕಾಳನ್ನು ರಸ್ತೆ ಪಕ್ಕದಲ್ಲಿರುವ ಓಯೋ ರೂಂಗೆ ಕಳುಹಿಸಿ ಅಲ್ಲಿಗೆ ಕಸ್ಟಮರ್​ ಕಳುಹಿಸಿ, ರೇಣುಕಾಳಿಂದ ಗಾಂಜಾ ಮಾರಿಸುತ್ತಿದ್ದ.

ಐಷಾರಾಮಿ ಜೀವನಕ್ಕಾಗಿ ಪ್ರಿಯತಮನ ಮಾತು ಕೇಳಿ ಲಾಕ್ ಡೌನ್ ನಲ್ಲಿ ಬೆಂಗಳೂರಿಗೆ ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ಪೊಲೀಸರ ಎದುರು ಆರೋಪಿತೆ ತಪ್ಪೊಪ್ಪಿಕೊಂಡಿದ್ದಾಳೆ.

ಪ್ರಿಯತಮೆಯ ಬಂಧನದ ಸುದ್ದಿ ಹೊರಬೀಳುತ್ತಿದ್ದಂತೆ ಪ್ರಿಯಕರ ಸಿದ್ದಾರ್ಥ್ ಹಾಗೂ ಸುಧಾಂಶು ತಲೆಮರೆಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಸದಾಶಿವ ನಗರ ಪೊಲೀಸರು ಬಲೆ ಬೀಸಿದ್ದಾರೆ.

RELATED TOPICS:
English summary :Bangalore

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...