ಬಿಜೆಪಿಗೆ ಅಧಿಕಾರ ಕೊಟ್ಟ ಜನರಿಗೆ ವೈರಾಗ್ಯ ಬಂದಿದೆ | ಜನತಾ ನ್ಯೂಸ್

16 Jun 2021
452

ಬೆಂಗಳೂರು : ಬಿಜೆಪಿ ಬಂದಾಗಲೆಲ್ಲ ಈ ಸಮಸ್ಯೆ ಉದ್ಭವಿಸುತ್ತಿದೆ. ನಮ್ಮಲ್ಲಿಯೂ ಈ ಹಿಂದೆ ಇಂತಹ ಪರಿಸ್ಥಿತಿ ಇತ್ತು. ಅದರಿಂದ ಪಾಠ ಕಲಿತು ನಾವು ತಪ್ಪು ತಿದ್ದುಕೊಂಡಿದ್ದೇವೆ ಎಂದರು.

ಜಯನಗರದಲ್ಲಿ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ ನಂತರ ಬಿಜೆಪಿ ಆಂತರಿಕ ಕಚ್ಚಾಟದ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಪಕ್ಷದ ಗೊಂದಲ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತದೆ. ಜನರಿಗೆ ಇದು ಮಾರಕ. ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ವಿರುದ್ಧ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಬಲಿಷ್ಠ ನಾಯಕ ಅಂದುಕೊಂಡಿದ್ದೆ. ಆದರೆ ಆಡಳಿತ ವಿಚಾರದಲ್ಲಿ ಅವರು ಬಹಳ ದುರ್ಬಲರಾಗಿದ್ದಾರೆ. ಬಿಜೆಪಿಗೆ ಯಾಕಾದರೂ ಅಧಿಕಾರ ಕೊಟ್ಟೆವು ಎಂದು ಜನರಿಗೆ ವೈರಾಗ್ಯ ಬಂದಿದೆ ಎಂದರು.

ಬಾಂಬೆ ಟೀಮ್​ನಿಂದ ಗೊಂದಲವಾಗುತ್ತಿದೆ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ನಾನು ಈ ಹಿಂದೆಯೇ ವಿಧಾನಸಭೆಯಲ್ಲೇ ಭವಿಷ್ಯ ನುಡಿದಿದ್ದೆ. ಈಶ್ವರಪ್ಪ ಅವರ ಈ ಟೀಕೆಗೆ ಬಿ.ಸಿ. ಪಾಟೀಲ್ ಈಗ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಮಾತನಾಡಿದರು.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಾಡಿದ 100 ನಾಟೌಟ್ ಪ್ರತಿಭಟನೆ ಕೇವಲ ಪಕ್ಷದ ಕಾರ್ಯಕ್ರಮ ಅಲ್ಲ. ಅದು ಜನರ ಆಕ್ರೋಶದ ಪ್ರತಿಧ್ವನಿ. ಈ ವರ್ಷ 50 ಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಅಮೆರಿಕದಲ್ಲೂ ಇಲ್ಲಿಗಿಂತ ಕಡಿಮೆ ಬೆಲೆ ಇದೆ. ಇಲ್ಲಿನ ಬೆಲೆ ಹೆಚ್ಚಳದಿಂದ ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಆದರೆ ಜನರ ಆದಾಯದಲ್ಲಿ ಏನಾದರೂ ಏರಿಕೆಯಾಗಿದೆಯಾ..? ಇಲ್ಲವೇ ಇಲ್ಲ. ಆದರೆ ಸರ್ಕಾರದ ಬೊಕ್ಕಸ ಮಾತ್ರ ತುಂಬುತ್ತಿದೆ. ಅದೇ ಕಾರಣಕ್ಕೆ ನಾವು ಈ ಸರ್ಕಾರ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಹೇಳುತ್ತಿದ್ದೇವೆ.

ಯಡಿಯೂರಪ್ಪನವರೆ, ಕೋವಿಡ್ ಚಿಕಿತ್ಸೆಗಾಗಿ ಯಾರೆಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಹಣ ಖರ್ಚು ಮಾಡಿದ್ದಾರೋ, ಅವರಿಗೆ ಆ ಹಣ ಹಿಂದುರಿಗಿಸಿ. ನಿಮ್ಮ ಆಯುಷ್ಮಾನ್ ಭಾರತ ಯೋಜನೆ ಮೂಲಕವಾಗಲಿ ಅಥವಾ ಬೇರೆ ಯಾವುದೇ ಯೋಜನೆಗಳ ಮೂಲಕವಾಗಲಿ ಜನರಿಗೆ ಅವರ ಹಣ ಹಿಂದಿರುಗಿಸಿ ಎಂದು ಕಾಂಗ್ರೆಸ್ ಪರವಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಜಯನಗರದಲ್ಲಿ ಶಾಸಕಿ ಸೌಮ್ಯಾರೆಡ್ಡಿ ಆಯೋಜಿಸಿದ್ದ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಬಿಬಿಎಂಪಿ ಪೌರ ಕಾರ್ಮಿಕರು, 50ಕ್ಕೂ ಹೆಚ್ಚು ಮಂದಿ ಆಶಾ ಕಾರ್ಯಕರ್ತೆಯರು, ನೂರಾರು ಬಡಜನರಿಗೆ ಆಹಾರದ ಕಿಟ್ ಅನ್ನು ಉಭಯ ನಾಯಕರು ವಿತರಿಸಿದರು.

RELATED TOPICS:
English summary :DKShivakumar

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...