Fri,Apr26,2024
ಕನ್ನಡ / English

ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ | ಜನತಾ ನ್ಯೂಸ್

17 Jun 2021
1141

ಬೆಂಗಳೂರು : ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ. ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತು ಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿರತಿ ನೆಲೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ. ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ.

ಕೋವಿಡ್ ಸೋಂಕಿನ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ.

ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಸೋಂಕನ್ನು ನಿಖರವಾಗಿ ಪತ್ತೆಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ.

ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋದನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಇಂದಿನ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿಯನ್ನು ಎದುರಿಸಿ ರಾಜ್ಯದ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ.

ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ನರೇಂದ್ರಮೋದಿಯವರು ತಾವೊಬ್ಬ ದುರ್ಬಲ ನಾಯಕನೆಂದು ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ.

56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರ ಮೋದಿಯವರು ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಅವರು ಸ್ಪಷ್ಟಪಡಿಸಲಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

RELATED TOPICS:
English summary :Siddaramaiah

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...