ನಮ್ಮದು ಜಾತಿ ಪಕ್ಷವಲ್ಲ, ಸಿದ್ದಾಂತದ ಪಕ್ಷ, ಕಾರ್ಯಕರ್ತರು ಬೆವರು ಮತ್ತು ರಕ್ತ ಸುರಿಸಿದ ಕಾರಣ ಪಕ್ಷ ಬೆಳೆದಿದೆ! | ಜನತಾ ನ್ಯೂಸ್

18 Jun 2021
439

ಬೆಂಗಳೂರು : ನಮ್ಮ ಪಾರ್ಟಿಗೆ ಯಾವುದೇ ಜಾತಿ ಇಲ್ಲ, ನಮ್ಮ ಪಾರ್ಟಿಗೆ ಇರುವುದು ಸಿದ್ಧಾಂತ ಮಾತ್ರ. ಆ ಸಿದ್ಧಾಂತದ ಆಧಾರದ ಮೇಲೆ ಪಾರ್ಟಿ ಬೆಳೆದಿದೆ ಎಂದು ಸಿಎಂ ಪರ ಹೇಳಿಕೆ ನೀಡುತ್ತಿರುವ ಮಠಾಧೀಶರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರೋಕ್ಷ ಟಾಂಗ್ ನೀಡಿದ್ದಾರೆ.

ಎಂಎಲ್‌ಸಿ ವಿಶ್ವನಾಥ್ ಅವರು ಸಿಎಂ ಪುತ್ರನ ವಿರುದ್ಧ ಮಾಡಿರುವ ಆರೋಪದ ಕುರಿತಾಗಿ ಮಾತನಾಡಿದ ಸಿ. ಟಿ. ರವಿ, ಆರೋಪ ಸಾಬೀತಾದಾಗ ಅದು ಅಪರಾಧವಾಗುತ್ತೆ, ಎಲ್ಲವೂ ಅಪರಾಧ ಅಲ್ಲ ಎಂದು ಸ್ಪಷ್ಪಪಡಿಸಿದರು.

ಭ್ರಷ್ಟಾಚಾರ ಆರೋಪದ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದ ಸಿ. ಟಿ. ರವಿ, ನಮ್ಮ ಪಕ್ಷದ ಬೆಳವಣಿಗೆಗೆ ನೂರಾರು ಮಠಾಧಿಪತಿಗಳು ಬೆಂಬಲ ಆಶೀರ್ವಾದ ಮಾಡಿದ್ದಾರೆ. ಅದಕ್ಕೆ ನಾವು ಚುನಾವಣೆಯಲ್ಲಿ 100 ಕ್ಕು ಹೆಚ್ಚು ಸ್ಥಾನ ಗೆದ್ದಿದ್ದು. ನಮ್ಮ ಪಕ್ಷಕ್ಕೆ ಜಾತಿ ಇಲ್ಲ. ಸಿದ್ದಾಂತದ ಪಕ್ಷ ನಮ್ಮದು. ನಾವು ಬೀದಿಯಲ್ಲಿ ನಿಂತು ಹೋರಾಟ ಮಾಡುವಾಗ ಹೊಡೆತ ತಿಂದವರು.

ನಮ್ಮ ಪಾರ್ಟಿಯಲ್ಲಿ ಎಂಎಲ್ಎ ಇದ್ದದ್ದು ಯಡಿಯೂರಪ್ಪ ಒಬ್ಬರೆ. ನಾನು ಬಾವುಟ ಕಟ್ಟುತ್ತಿದ್ದೆ. ಆಗ ದೇವೇಗೌಡರು ಪಕ್ಷ ಸೇರು ಅಂದಿದ್ದರು. ನಮ್ ಈ ಪಕ್ಷದ ಸಿದ್ದಾಂತ ದೇಶದ ಹಿತವಾಗಿತ್ತು. ಅದಕ್ಕೆ ನಾನು ಬಿಜೆಪಿಗೆ ಬಂದೆ. ನಮಗೆ ಅಧಿಕಾರ ಸಿಕ್ಕಾಗ ಜಾತಿ ಬರುತ್ತೆ. ನಾವು ಜೈಲಿಗೆ ಹೋಗುವಾಗ ಯಾವ ಜಾತಿ ಬರಲಿಲ್ಲ. ಎಲ್ಲ ಜಾತಿಗಳ ಸಹಕಾರ ಇದ್ದರೆ ಮಾತ್ರ ಅಧಿಕಾರ ಇಲ್ಲವಾದರೆ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದರು.

ರಾಜ್ಯದ ಹಿತಾಸಕ್ತಿ, ಪಕ್ಷದ ಹಿತದೃಷ್ಟಿಯಿಂದ ಚರ್ಚೆ ನಡೆಸುತ್ತೇವೆ. ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಪ್ರಸ್ತಾಪ ಮಾಡಲು ಆಗಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಒಳಿತು-ಕೆಡುಕು ಚರ್ಚೆ ಮಾಡುತ್ತೇವೆ. ಸಂಪುಟ ಪುನರ್ ರಚನೆ ವಿಚಾರಕ್ಕೆ ಸಿಎಂಗೆ ಪರಮಾಧಿಕಾರ ಇದೆ. ನಾವು ಪಕ್ಷದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಮಾಡಬಹುದು ಎಂದರು.

RELATED TOPICS:
English summary :CT Ravi

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...