Tue,Apr23,2024
ಕನ್ನಡ / English

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಕುರಿತು ಉನ್ನತ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿದ ಅಮಿತ್ ಷಾ | ಜನತಾ ನ್ಯೂಸ್

18 Jun 2021
1294

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ಇಂದು ಶುಕ್ರವಾರ ದೆಹಲಿಯಲ್ಲಿ ಜರುಗಿತು.

ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಎನ್‌ಎಸ್‌ಎ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಬ್ಯೂರೋ ನಿರ್ದೇಶಕ ಅರವಿಂದ್ ಕುಮಾರ್, ಆರ್ ಅಂಡ್ ಎಡಬ್ಲ್ಯೂ ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್, ಸಿಆರ್‌ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ ಮತ್ತು ಜೆ ಅಂಡ್ ಕೆ ಡಿಜಿಪಿ ದಿಲ್‌ಬಾಗ್ ಸಿಂಗ್ ಸಹ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ, "ಜಮ್ಮು ಮತ್ತು ಕಾಶ್ಮೀರದ ಜನರ ಸರ್ವತೋಮುಖ ಅಭಿವೃದ್ಧಿ ಮತ್ತು ಕಲ್ಯಾಣವು ಮೋದಿ ಸರ್ಕಾರದ ಮೊದಲ ಆದ್ಯತೆಯಾಗಿದೆ" ಎಂದು ಅಮಿತ್ ಷಾ ಹೇಳಿದರು.

ಕೃಷಿಯನ್ನು ಉತ್ತೇಜಿಸುವುದು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವುದೂ ಸಹ ಸಭೆಯ ಪ್ರಮುಖ ಅಂಶಗಳಾಗಿವೆ. ಇದೆ ಸಂದರ್ಭದಲ್ಲಿ, ನಿರಾಶ್ರಿತರಿಗೆ ಸಾಧ್ಯವಾದಷ್ಟು ಬೇಗ ನಿರಾಶ್ರಿತರ ಪ್ಯಾಕೇಜ್‌ನ ಪ್ರಯೋಜನಗಳು ಸಿಗುವಂತೆ ನೋಡಿಕೊಳ್ಳಬೇಕೆಂದು ಅವರು ಅಧಿಕಾರಿಗಳನ್ನು ಕೇಳಿದರು.

ವ್ಯಾಕ್ಸಿನೇಷನ್ ಡ್ರೈವ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಗುರಿಯ 76% ಸಾಧಿಸಿದಕ್ಕಾಗಿ ಮತ್ತು ಕೇಂದ್ರಾಡಳಿತ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ 100% ಗುರಿ ತಲುಪಿದಕ್ಕಾಗಿ, ಜಮ್ಮು ಮತ್ತು ಕಾಶ್ಮೀರ ನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಮತ್ತು ಅವರ ತಂಡವನ್ನು ಅಮಿತ್ ಷಾ ಅಭಿನಂದಿಸಿದರು.

ಕೇಂದ್ರ ಗೃಹ ಸಚಿವರು ಜಮ್ಮು ಮತ್ತು ಕಾಶ್ಮೀರ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಇತರ ರೈತ ಸ್ನೇಹಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳನ್ನು ಕೇಳಿದರು. ಕೈಗಾರಿಕಾ ನೀತಿಯ ಪ್ರಯೋಜನಗಳು ಸಣ್ಣ-ಪ್ರಮಾಣದ ಕೈಗಾರಿಕೆಗಳಿಗೆ ತಲುಪುವಂತೆ ನೋಡಿಕೊಳ್ಳಬೇಕೆಂದು ಅವರು ಅಧಿಕಾರಿಗಳನ್ನು ಕೇಳಿದರು.

"ಹೊಸ ಪಂಚಾಯತ್ ಸದಸ್ಯರ ತರಬೇತಿಗಾಗಿ ವ್ಯವಸ್ಥೆ ಮಾಡಬೇಕು ಮತ್ತು ಅವರು ದೇಶಾದ್ಯಂತ ಅತ್ಯಂತ ಅಭಿವೃದ್ಧಿ ಹೊಂದಿದ ಪಂಚಾಯಿತಿಗಳಿಗೆ ಭೇಟಿ ನೀಡುವಂತೆ ಮಾಡಬೇಕು" ಎಂದು ಅಮಿತ್ ಶಾ ಹೇಳಿದರು.

RELATED TOPICS:
English summary :Amit Shah chaired high level meeting on J & K development

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...