Wed,Apr24,2024
ಕನ್ನಡ / English

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕಿಕ್ ಬ್ಯಾಕ್: ಎಸಿಬಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂಸ್

19 Jun 2021
2026

ಬೆಂಗಳೂರು : ಭದ್ರಾ ಮೇಲ್ದಂಡೆ ಕಾಮಗಾರಿಯ ₹ 20 ಸಾವಿರ ಕೋಟಿ ಟೆಂಡರ್‌ನಲ್ಲಿ ಶೇ 10ರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

"ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಸಿಎಂ ಬಿಎಸ್‌.ಯಡಿಯೂರಪ್ಪ ಅವರ ಮಗನ ಮೇಲಿದೆ. ಎರಡನೆಯದಾಗಿ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ" ಎಂದು ತಿಳಿಸಿದ್ದಾರೆ.

"ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು" ಎಂದು ಒತ್ತಾಯಿಸಿದ್ದಾರೆ.

"ಈಗಿನ ಬಿಜೆಪಿ ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ಶಾಸಕ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ಗುತ್ತಿಗೆದಾರರ ಸರ್ಕಾರ ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು" ಎಂದಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧದ ಆರೋಪ ಇದೇ ಮೊದಲಬಾರಿ ಕೇಳಿಬಂದದ್ದಲ್ಲ, ಇನ್ನೊಬ್ಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಳೆದ ಒಂದು ವರ್ಷದಿಂದ ವಿಜಯೇಂದ್ರ ವಿರುದ್ದ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.

ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ದ ಯಾವುದೇ ಶಿಸ್ತು ಕ್ರಮ ಕೈಗೊಳ್ಳದೆ ಅವರಿಗೆ ಇನ್ನಷ್ಟು ಅವಕಾಶ ನೀಡುತ್ತಿರುವುದನ್ನು ನೋಡಿದರೆ ಒಂದೊ ಬಿಜೆಪಿಯ ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ. ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥಮಾಡಿಕೊಳ್ಳಬೇಕಾಗುತ್ತದೆ.

ಪ್ರಧಾನಿ ನರೇಂದ್ರಮೋದಿಯ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದೂ ವ್ಯಂಗ್ಯವಾಡಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...