Fri,Apr19,2024
ಕನ್ನಡ / English

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂಸ್

20 Jun 2021
1312

ಬೆಂಗಳೂರು : ಕರೊನಾದಿಂದ ಪತ್ನಿಯನ್ನು ಕಳೆದುಕೊಂಡ ದುಃಖದಲ್ಲಿ ಟೆಕ್ಕಿ ಪತಿ ಇದ್ದರೆ, ಪತ್ನಿಯ ಸಂಬಂಧಿಕರು ಆಕೆಯ ಆಸ್ತಿ ಕಬಳಿಸುವ ಸಂಚು ರೂಪಿಸುತ್ತಿರುವ ಅಮಾನವೀಯ ಸಂಗತಿಯೊಂದು ಬೆಳಕಿಗೆ ಬಂದಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಟೆಕ್ಕಿ ಪ್ರವೀಣ್ ಹಾಗೂ ಪತ್ನಿ ನಿಮಿತಾ ವೃತ್ತಿಯಲ್ಲಿ ಇಬ್ಬರೂ ಸಾಫ್ಟ್​ವೇರ್ ಇಂಜಿನಿಯರ್ಸ್. ಪ್ರವೀಣ್ ಕುಮಾರ್ ಎಂಬುವರು ಆರ್.ಆರ್. ನಗರದ ಚನ್ನಸಂದ್ರದ ನಿವಾಸಿಯಾಗಿರುವ ಕರಿಷ್ಮಾ ಕ್ಲಾಸಿಕ್ ಅಪಾರ್ಟ್​​​ಮೆಂಟ್​​ನಲ್ಲಿ ವಾಸವಾಗಿದ್ದರು. 2015ರಲ್ಲಿ ನಿಮಿತಾ ಎಂಬುವರನ್ನು ಪ್ರವೀಣ್ ವರಿಸಿದ್ದರು.

ಈ ನಡುವೆ ಕಳೆದ ಏಪ್ರಿಲ್ 20ರಂದು ನಿಮಿತಾಗೆ ಉಸಿರಾಟ ಸಮಸ್ಯೆ ಕಂಡುಬಂದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಮೇ 13ಕ್ಕೆ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್​ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ ಆಕೆ ಮೃತಪಟ್ಟ ಘಳಿಗೆ ಸರಿಯಿಲ್ಲ…ರಾಹುಕಾಲ ಇದೆ… ಮೂರು ತಿಂಗಳು ಮನೆಗೆ ಬರಬೇಡ ಎಂದು ಹೇಳಿ ಪತಿ ಪ್ರವೀಣ್​ನನ್ನು ಮೃತಳ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.

ಇದಾದ ಒಂದು ತಿಂಗಳ ಬಳಿಕ ಪ್ರವೀನ್​ ಮನೆಗೆ ಮರಳಿದ್ದಾರೆ. ಅಷ್ಟರಲ್ಲಾಗಲೇ ಮನೆಯಿಲ್ಲಿದ್ದ 5 ರಿಂದ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಲಕ್ಷ ರೂ. ನಗದು ಹಾಗೂ ಕಾರನ್ನು ಸಂಬಂಧಿಕರು ದೋಚಿದ್ದಾರೆ. ಮೃತಳ ಬಾವ ಶಿವಪ್ಪ, ಆಕೆಯ ಸಹೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಹಲವರಿಂದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಪ್ರವೀಣ್​ ಆರೋಪಿಸಿದ್ದಾರೆ.

ಈ ಬಗ್ಗೆ ಆರ್​ಆರ್ ನಗರ ಠಾಣೆಗೆ ದೂರು ನೀಡಿದರೂ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ. ಎಫ್‌ಐಆರ್‌ ಬದಲು ಎಸ್​ಸಿಆರ್‌ ದಾಖಲಿಸಿ ಸೆಟಲ್​ಮೆಂಟ್​ಗೆ ಪೊಲೀಸರು ಮುಂದಾದ ಆರೋಪ ಕೇಳಿಬಂದಿದೆ.

RELATED TOPICS:
English summary :Bangalore

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...