ಯಡಿಯೂರಪ್ಪ ನೇತೃತ್ವದ ಸರ್ಕಾರ ಲೂಟಿ ಹೊಡೆಯುತ್ತಿದೆ, ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ | ಜನತಾ ನ್ಯೂಸ್

21 Jun 2021
433

ಕೊಪ್ಪಳ : ನರೇಂದ್ರ ಮೋದಿ ಅಚ್ಛೇದಿನ್ ಬರುತ್ತೆ ಅಂದ್ರು, ಬಂದಿದೆಯಾ? ಯಡಿಯೂರಪ್ಪ ನೇತೃತ್ವದ ಸರ್ಕಾರ ಲೂಟಿ ಹೊಡೆಯುತ್ತಿದೆ. ಲೂಟಿ ಹೊಡೆಯುವುದನ್ನು ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ. ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ, ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಎಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್​ ಆರೋಪ ಮಾಡ್ತಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಬೆಲೆ ಹೆಚ್ಚಳವಾಗಿದೆ ಎಂದು ಕೊಪ್ಪಳದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರವಿಂದ ಬೆಲ್ಲದ ಫೋನ್ ಟ್ಯಾಪಿಂಗ್ ಪ್ರಕರಣ ತನಿಖೆಯಾಗಬೇಕು. ತನಿಖೆಗೆ ನಾನು ಒತ್ತಾಯ ಮಾಡಿದ್ದೇನೆ. ಇನ್ನೊಬ್ಬರ ಫೋನ್ ಕದ್ದಾಲಿಕೆ ಮಾಡೋ ಅಧಿಕಾರ ಯಾರಿಗೂ ಇಲ್ಲ. ಸರ್ಕಾರಕ್ಕಾಗಲಿ, ಪೊಲೀಸರಿಗಾಗಲಿ ಅಧಿಕಾರ ಇಲ್ಲ. ಈ ಹಿಂದೆ ರಾಮಕೃಷ್ಣ ಹೆಗಡೆ ಸಮಯದಲ್ಲಿ ಏನಾಗಿದೆ ಗೊತ್ತಿದೆಯಲ್ಲ? ಇದು ಗಂಭೀರವಾದ ವಿಚಾರ, ಇದು ಯಾವುದೇ ಪಕ್ಷದವರಾಗಲಿ ಯಾರೇ ಆಗಲಿ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡೋ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದವು. ಇದಕ್ಕೆಲ್ಲ ಸಿಎಂ ಯಡಿಯೂರಪ್ಪ ಅವರೇ ಕಾರಣ. ಕೊರೊನಾ ಎರಡನೇ ಅಲೆಯ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರೆ ಅತಿ ಹೆಚ್ಚು ಸಾವು ಸಂಭವಿಸುತ್ತಿರಲಿಲ್ಲ. ವೆಂಟಿಲೇಟರ್, ಬೆಡ್, ಆಕ್ಸಿಜನ್ ಬೆಡ್, ರೆಮ್ಡಿಸಿವರ್ ಇಂಜೆಕ್ಚನ್ ಸಿಗದೆ ಜನ ಸಾವನ್ನಪ್ಪಿದರು.

ಚಾಮರಾಜನಗರದಲ್ಲಿ 36 ಜನ ಆಕ್ಸಿಜನ್ ಸಿಗದೆ ಸತ್ತರು. ಅವರಿಗೆ ಆಕ್ಸಿಜನ್ ಸರ್ಕಾರ ಕೊಟ್ಟಿದ್ದರೆ 36 ಜನರ ಪ್ರಾಣ ಉಳಿಯುತ್ತಿತ್ತು. ಆದರೆ, ಸರ್ಕಾರದವರು ಹಸಿ ಸುಳ್ಳು ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಚಾಮರಾಜನಗರ ದುರಂತದ ಬಗ್ಗೆ ನಾನು ನ್ಯಾಯಾಂಗ ತನಿಖೆಗೆ ಒತ್ತಾಯ ಮಾಡಿದೆ. ಆದರೆ, ತನಿಖೆ ಮಾಡಿಸಲಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಇರಕೂಡದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವರ ಸರ್ಕಾರದಲ್ಲಿ ಎಷ್ಟು ಕೆಜಿ ಕೊಡುತ್ತಿದ್ದಾರೆ ? ನಾನು ಕೊರೊನಾ ಸಂಧರ್ಭದಲ್ಲಿ ಸಿಎಂ ಆಗಿದ್ದರೆ ಪ್ರತಿ ಒಬ್ಬರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದೆ.

ಕೊರೊನಾ ಬರುತ್ತದೆ ಎಂದು ಗೊತ್ತಿದ್ದರೂ ನಿರ್ಲಕ್ಷ್ಯ ಮಾಡಿದರು. ನಿರ್ಲಕ್ಷ್ಯಕ್ಕೆ ಸಾವಿರಾರು ಜನ ಪ್ರಾಣ ಕಳೆದುಕೊಂಡರು. ಮೋದಿ ಅಚ್ಚೆ ದಿನ್ ಅಂತ ಹೇಳಿದ್ದರು. ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಡಬಲ್ ಇಂಜಿನ್ ಸರ್ಕಾರ ಬಂದ್ರೆ ಸ್ವರ್ಗ ಬರುತ್ತದೆ ಅಂತ ಹೇಳಿದ್ದರು. ಈಗ ಸ್ವರ್ಗ ಬಂತಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿ ಬಂದ ಮೇಲೆ ಎಲ್ಲ ಬೆಲೆ ಹೆಚ್ಚಾಗಿದೆ. ನಾಲ್ಕು ಸಾವಿರಕ್ಕೆ ಜೀವನ ಸಾಗಿಸೋ ಕುಟುಂಬಕ್ಕೆ ಹತ್ತು ಸಾವಿರ ಬೇಕಾಗಿದೆ. ಇಂತಹ ಕೆಟ್ಟ ಸರ್ಕಾರ ಈಗ ಅಸ್ತಿತ್ವದಲ್ಲಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬಗ್ಗೆ ಚರ್ಚೆಯಾಗುತ್ತಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ಸಿಸ್ಟಂ ಇದೆ. ಚುನಾವಣೆ ಮುಗಿದ ಬಳಿಕ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರೋ ವೈಯಕ್ತಿಕ ಅಭಿಪ್ರಾಯ ಹೇಳಿದ ತಕ್ಷಣ ಅದು ಪಕ್ಷದ ಅಭಿಪ್ರಾಯ ಅಲ್ಲ. ಇದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೊದಲು, 4 ಸಾವಿರದಲ್ಲಿ ಜೀವನ ಸಾಗಿಸುತ್ತಿದ್ದವರಿಗೆ 10,000 ರೂಪಾಯಿ ಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ದೇಶ, ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರವಿದೆ. ಅನುದಾನ ಕೇಳಿದರೆ ಸಿಎಂ ಬಿಎಸ್​ವೈ ಕೊರೊನಾ ಅಂತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

RELATED TOPICS:
English summary :Koppala

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...