Fri,Apr26,2024
ಕನ್ನಡ / English

ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಮಾಡಿದ ರಾಜ್ಯ ಸರ್ಕಾರ | ಜನತಾ ನ್ಯೂಸ್

23 Jun 2021
1843

ಬೆಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇದೀಗ ಬಿಡುಗಡೆ ಮಾಡಲಾಗಿರುವ ಎಸ್ ಓ ಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆದೇಶಿಸಿದೆ.

ಪರೀಕ್ಷೆಯ ಕೆಲಸಗಳಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಜಿಲ್ಲಾಡಳಿತದ ಸಹಾಯದೊಂದಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಪರೀಕ್ಷೆಯ ಸಂದರ್ಭದಲ್ಲಿ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು ಎಂದು ಸೂಚಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ 1% ಸೋಡಿಯಂ ಹೈಪೊಕ್ಲೋರೈಟ್ಸ್ ಸೆಲ್ಯೂಷನ್ ಸೋಂಕು ನಿವಾರಕ ದ್ರಾವಣವನ್ನು ಸಂಬಂಧಪಟ್ಟ ನಗರ/ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೂಲಕ ಸಿಂಪಡಿಸಿ ಸ್ವಚ್ಛಗೊಳಿಸುವುದು.

ಪ್ರತಿ ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ ಪರೀಕ್ಷೆಯಾದ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳು/ಪೀಠೋಪಕರಣಗಳನ್ನು ಮತ್ತು ಇನ್ನಿತರ ವಸ್ತುಗಳನ್ನು 2.5 % ಲೈಸೂಲ್ ಅಥವಾ ಹ್ಯಾಂಡ್ ಸ್ಯಾನಿಟೈಸರ್ನಿಂದ ಸ್ಯಾನಿಟೈಸ್ ಮಾಡುವುದು.

ಪ್ರತಿ ಪರೀಕ್ಷಾ ಕೇಂದ್ರದಲ್ಲೂ, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಪ್ರದೇಶ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು.

ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸುವುದು.

ದೈಹಿಕ ಕನಿಷ್ಠ ಆರು ಅಡಿಗಳ ಅಂತರ ಕಾಪಾಡಿಕೊಳ್ಳುವುದು.

ಪ್ರತಿ ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆ, ಒಬ್ಬ ವಿದ್ಯಾರ್ಥಿಯಿಂದ ಮತ್ತೊಬ್ಬ ವಿದ್ಯಾರ್ಥಿಯ ನಡುವೆ 6 ಅಡಿ ಅಂತರವಿರಬೇಕು.

ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷೆಯ ಮೊದಲು ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಬೇಕು.

ಒಂದೊಮ್ಮೆ ವಿದ್ಯಾರ್ಥಿಗಳು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅಂಥವರಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು.

ಪ್ರತಿ ವಿದ್ಯಾರ್ಥಿಯು ತಮ್ಮದೇ ಆದ ನೀರಿನ ಬಾಟಲಿಗಳನ್ನು ತರಲು ಅವಕಾಶ ನೀಡುವುದು.

ಸ್ಯಾನಿಟೈಸರ್ ನ್ನು ಮಂಡಳಿಯಿಂದ ನೀಡಲಾಗುವುದು. ಆರೋಗ್ಯ ತಪಾಸಣಾ ಕೌಂಟರಿನಲ್ಲಿ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು.

RELATED TOPICS:
English summary :SSLC EXAM

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...