ಇಂದು ಕಾರವಾರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಭೇಟಿ | ಜನತಾ ನ್ಯೂಸ್

24 Jun 2021
356

ಕಾರವಾರ : ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಉತ್ತರಕನ್ನಡ ಜಿಲ್ಲೆಯ​ ಕಾರವಾರ ಹಾಗೂ ಕೊಚ್ಚಿಗೆ ಭೇಟಿ ನೀಡಲಿದ್ದಾರೆ.

ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಕದಂಬ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಾಮಗಾರಿಗಳ ವೀಕ್ಷಣೆಗೆ ರಾಜನಾಥ್ ಸಿಂಗ್ ಆಗಮಿಸುತ್ತಿದ್ದಾರೆ. ಇದೇ ವೇಳೆ ನೌಕಾನೆಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಟ್ಟಿಯೊಂದನ್ನು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ ದೆಹಲಿಯಿಂದ ಗೋವಾಕ್ಕೆ ರಾಜನಾಥ್ ಸಿಂಗ್ ಆಗಮಿಸಲಿದ್ದು, ಅಲ್ಲಿಂದ 1.30ಕ್ಕೆ ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಆಗಮಿಸಲಿದ್ದಾರೆ. ಮೊದಲು ಜಟ್ಟಿ ಕಾಮಗಾರಿಯ ಉದ್ಘಾಟನೆ ನಡೆಸಿ ನಂತರ ಎರಡನೇ ಹಂತದ ವಿಸ್ತರಣೆ ಕಾಮಗಾರಿಗಳನ್ನ ವೀಕ್ಷಿಸಿ, ಅಧಿಕಾರಿಗಳ ಜೊತೆ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ.

ಕಾರವಾರದಲ್ಲಿ ನಡೆಯುತ್ತಿರುವ "ಪ್ರಾಜೆಕ್ಟ್ ಸೀಬರ್ಡ್" ಯೋಜನೆ ಹಾಗೂ ಕೊಚ್ಚಿಯಲ್ಲಿನ ವಿಮಾನವಾಹಕ ನೌಕೆಯ ನಿರ್ಮಾಣದ ಪ್ರಗತಿ ಬಗ್ಗೆ ಸಚಿವ ರಾಜನಾಥ್​ ಸಿಂಗ್​ ಪರಿಶೀಲಿಸಲಿದ್ದಾರೆ. ಭೇಟಿ ವೇಳೆ ರಾಜನಾಥ್​ ಸಿಂಗ್ ಅವರಿಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್​ ನೀಡಲಿದ್ದಾರೆ.

ಕಾರವಾರ, ಕೊಚ್ಚಿ ಭೇಟಿ ಕುರಿತು ರಾಜನಾಥ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕಾರವಾರ ಹಾಗೂ ಕೊಚ್ಚಿಗೆ ಎರಡು ದಿನಗಳ ಕಾಲ ಭೇಟಿ ನೀಡುತ್ತಿದ್ದು, ದೆಹಲಿಯಿಂದ ತೆರಳಲಾಗುತ್ತಿದೆ. ಭೇಟಿ ವೇಳೆ ಕಾರವಾರ ನೌಕಾನೆಲೆ ವಿಸ್ತರಣೆಯ ಕಾಮಗಾರಿಗಳನ್ನು ಪರಿಶೀಲನೆ ಹಾಗೂ ಕೊಚ್ಚಿಯಲ್ಲಿ ಇಂಡಿಜಿನಸ್​ ವಿಮಾನವಾಹಕ ನೌಕೆ (​ಐಎಸಿ) ನಿರ್ಮಾಣದ ಪ್ರಗತಿಯನ್ನೂ ಪರಿಶೀಲಿಸಲಿದ್ದೇನೆಂದು ಹೇಳಿದ್ದಾರೆ.

RELATED TOPICS:
English summary :Karwar

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...