ಬೈಕ್​ನಲ್ಲಿ ಹೋಗುವಾಗ ಕತ್ತಿಗೆ ಸಿಲುಕಿದ ಗಾಳಿಪಟದ ದಾರ: ಕತ್ತು ಮತ್ತು ಕೈ ಬೆರಳುಗಳು ಕಟ್‌! | ಜನತಾ ನ್ಯೂಸ್

24 Jun 2021
378

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಹಠಾತ್ ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೊಬ್ಬರ ಕತ್ತು ಮತ್ತು ಕೈಗೆ ಗಂಭೀರ ಸ್ವರೂಪದ ಗಾಯವಾಗಿದೆ.

ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು.

ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. ಇದರಿಂದ ಪಾರಾಗಲು ಯತ್ನಿಸಿದ ವ್ಯಕ್ತಿ ಎಡ ಕೈಯಿಂದ ದಾರವನ್ನು ಎಳೆದಿದ್ದಾರೆ. ಎಳೆದಾಗ ಕೈಗೂ ತೀವ್ರ ಸ್ವರೂಪದ ಗಾಯವಾಗಿದ್ದು, 2 ಬೆರಳುಗಳು ತುಂಡಾಗುವ ಹಂತಕ್ಕೆ ಬಂದಿವೆ.

ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡೆದಿರುವ ಘಟನೆಯ ಬಗ್ಗೆ ಗಾಯಗೊಂಡಿರುವ ವ್ಯಕ್ತಿ ವಿವರಿಸಿದ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ -
ಗಾಳಿಪಟವನ್ನು ದಯವಿಟ್ಟು ಬ್ಯಾನ್ ಮಾಡಿ ಎಂದು ಜನಪ್ರತಿನಿಧಿಗಳಿಗೆ ಈ ಮೂಲಕ ಕೇಳಿಕೊಳ್ಳುತ್ತೇನೆ. ಪಕ್ಷಿಗಳಿಗಾದರೂ, ಮನುಷ್ಯರಿಗಾದರೂ ಇದೇ ಗತಿ ಬರುತ್ತದೆ. ನಾನು ಇಂದು ಉಳಿದಿರುವುದೇ ಹೆಚ್ಚು. ಒಂದು ವೇಳೆ ತುಸು ವೇಗವಾಗಿ ದ್ವಿಚಕ್ರವಾಹನದಲ್ಲಿ ಬಂದು ದಾರಕ್ಕೆ ಸಿಲುಕಿದ್ದರೆ ನನ್ನ ಕತ್ತನ್ನು ಮಾತ್ರ ನೋಡಬೇಕಿತ್ತು. ಅಂತಹ ಪರಿಸ್ಥಿತಿ ಉಂಟಾಗುತ್ತಿತ್ತು.

ಚಿಕ್ಕ ಹುಡುಗರು ಇದ್ದಿದ್ದರೆ ಅವರ ಗತಿ ಏನಾಗುತ್ತಿತ್ತು ಎಂಬುದನ್ನು ಊಹಿಸಲು ಕಷ್ಟವಾಗುತ್ತದೆ. ನಾನು ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮವನ್ನು ಪಾಲಿಸಿಕೊಂಡೇ ಹೋಗುತ್ತಿದ್ದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸುವಂತೆ ಗಾಯಗೊಂಡ ವ್ಯಕ್ತಿ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

RELATED TOPICS:
English summary :Bangalore

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...