ಬೈಕ್​ನಲ್ಲಿ ಹೋಗುವಾಗ ಕತ್ತಿಗೆ ಸಿಲುಕಿದ ಗಾಳಿಪಟದ ದಾರ: ಕತ್ತು ಮತ್ತು ಕೈ ಬೆರಳುಗಳು ಕಟ್‌! | ಜನತಾ ನ್ಯೂಸ್

24 Jun 2021
372

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಹಠಾತ್ ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೊಬ್ಬರ ಕತ್ತು ಮತ್ತು ಕೈಗೆ ಗಂಭೀರ ಸ್ವರೂಪದ ಗಾಯವಾಗಿದೆ.

ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು.

ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. ಇದರಿಂದ ಪಾರಾಗಲು ಯತ್ನಿಸಿದ ವ್ಯಕ್ತಿ ಎಡ ಕೈಯಿಂದ ದಾರವನ್ನು ಎಳೆದಿದ್ದಾರೆ. ಎಳೆದಾಗ ಕೈಗೂ ತೀವ್ರ ಸ್ವರೂಪದ ಗಾಯವಾಗಿದ್ದು, 2 ಬೆರಳುಗಳು ತುಂಡಾಗುವ ಹಂತಕ್ಕೆ ಬಂದಿವೆ.

ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡೆದಿರುವ ಘಟನೆಯ ಬಗ್ಗೆ ಗಾಯಗೊಂಡಿರುವ ವ್ಯಕ್ತಿ ವಿವರಿಸಿದ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ -
ಗಾಳಿಪಟವನ್ನು ದಯವಿಟ್ಟು ಬ್ಯಾನ್ ಮಾಡಿ ಎಂದು ಜನಪ್ರತಿನಿಧಿಗಳಿಗೆ ಈ ಮೂಲಕ ಕೇಳಿಕೊಳ್ಳುತ್ತೇನೆ. ಪಕ್ಷಿಗಳಿಗಾದರೂ, ಮನುಷ್ಯರಿಗಾದರೂ ಇದೇ ಗತಿ ಬರುತ್ತದೆ. ನಾನು ಇಂದು ಉಳಿದಿರುವುದೇ ಹೆಚ್ಚು. ಒಂದು ವೇಳೆ ತುಸು ವೇಗವಾಗಿ ದ್ವಿಚಕ್ರವಾಹನದಲ್ಲಿ ಬಂದು ದಾರಕ್ಕೆ ಸಿಲುಕಿದ್ದರೆ ನನ್ನ ಕತ್ತನ್ನು ಮಾತ್ರ ನೋಡಬೇಕಿತ್ತು. ಅಂತಹ ಪರಿಸ್ಥಿತಿ ಉಂಟಾಗುತ್ತಿತ್ತು.

ಚಿಕ್ಕ ಹುಡುಗರು ಇದ್ದಿದ್ದರೆ ಅವರ ಗತಿ ಏನಾಗುತ್ತಿತ್ತು ಎಂಬುದನ್ನು ಊಹಿಸಲು ಕಷ್ಟವಾಗುತ್ತದೆ. ನಾನು ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮವನ್ನು ಪಾಲಿಸಿಕೊಂಡೇ ಹೋಗುತ್ತಿದ್ದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸುವಂತೆ ಗಾಯಗೊಂಡ ವ್ಯಕ್ತಿ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

RELATED TOPICS:
English summary :Bangalore

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...