Fri,Apr26,2024
ಕನ್ನಡ / English

ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಆತಂಕ ಬೇಡ, ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಕೇಸ್ ದಾಖಲು: ಸುಧಾಕರ್ | ಜನತಾ ನ್ಯೂಸ್

24 Jun 2021
1130

ಬೆಂಗಳೂರು : ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸಾರ್ವಜನಿಕರು ಹೆಚ್ಚು ಆತಂಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ನಗರದಲ್ಲಿ ಮಾತಾನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ಒಂದು ಕೇಸ್ ಮತ್ತೆ ಆಗಿತ್ತು. ಈಗ ಬೆಂಗಳೂರಿನಲ್ಲಿ ಹಿರಿಯ ವ್ಯಕ್ತಿಯೊಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ಕಂಡು ಬಂದಿದೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರನ್ನ ಪರೀಕ್ಷೆ ಮಾಡಲಾಗಿದ್ದು, ಇಂದು ವರದಿ ಬರಲಿದೆ ಎಂದು ತಿಳಿಸಿದರು.

ಡೆಲ್ಟಾ ಪ್ಲಸ್ ವೈರಸ್ ಕುರಿತು ಯಾರು ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ. ಡೆಲ್ಟಾ ಪ್ಲಸ್ ಮತ್ತು ಡೆಲ್ಟಾ ವೈರಸ್ ಒಂದೇ ಗುಣಲಕ್ಷಣ ಹೊಂದಿದೆ. ಆದರೆ ಚಿಕಿತ್ಸೆ ವಿಧಾನ ಸ್ವಲ್ಪ ಬೇರೆ ಇದೆ ಎಂದು ಸ್ಪಷ್ಟಪಡಿಸಿದರು.

ಕೋವಿಡ್ 3ನೆ ಪರಿವರ್ತಿತ ಅಲೆ ಡೆಲ್ಟಾ ಪ್ಲಸ್ ಸೋಂಕು ರೂಪದಲ್ಲಿ ಕಾಣಿಸಿಕೊಳ್ಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಇನ್ನೂ ಅಧ್ಯಯನ ನಡೆಯಬೇಕೆಂದು ಹೇಳಿದರು.

ಅನಗತ್ಯವಾಗಿ ಸಾರ್ವಜನಿಕರು ಈ ವೈರಸ್ ಬಗ್ಗೆ ಹೆಚ್ಚು ಆತಂಕ ಪಡಬೇಕಾದ ಅಗತ್ಯವಿಲ್ಲ. ಈ ಹಿಂದೆ ಒಂದು ಮತ್ತು ಎರಡನೆ ಕೋವಿಡ್ ಅಲೆ ಸಂದರ್ಭದಲ್ಲಿ ಯಾವ ರೀತಿ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗಿತ್ತೋ ಅದೇ ರೀತಿ ಈಗಲೂ ನಿಯಮಗಳನ್ನು ಪಾಲನೆ ಮಾಡಿದರೆ ಅಪಾಯದಿಂದ ಪಾರಾಗಬಹುದು ಎಂದು ಸಲಹೆ ಮಾಡಿದರು. ಕೋವಿಡ್ ಲಸಿಕೆ ಪಡೆದರೆ ಯಾವುದೇ ರೀತಿಯ ಅಪಾಯ ಬರುವುದಿಲ್ಲ. ಲಸಿಕೆ ಪಡೆದ ತಕ್ಷಣ ಇದು ನಮ್ಮನ್ನು ಬಾಧಿಸುವುದೂ ಇಲ್ಲ ಎಂಬ ಬಗ್ಗೆಯೂ ಖಚಿತತೆ ಇಲ್ಲ. ಯಾರು ಲಸಿಕೆ ಪಡೆದಿಲ್ಲವೋ ಅಂತಹವರು ಕೂಡಲೇ ಲಸಿಕೆ ಪಡೆಯಬೇಕು ಎಂದು ಹೇಳಿದರು.

RELATED TOPICS:
English summary :Delta plus Corona

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...