ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ | ಜನತಾ ನ್ಯೂಸ್
ತುಮಕೂರು : ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ತಿರುಮಲ ಪಾಳ್ಯದಲ್ಲಿ ನಡೆದಿದೆ.
ಮೃತರನ್ನ ಹೇಮಲತಾ (34), ಮಾನಸ(6), ಪೂರ್ವಿಕ(3) ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲ ಪಾಳ್ಯದ ಬಳಿ ಇರುವ ತೋಟದಲ್ಲಿ ತೆರೆದ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ 7.30ರ ಸಮಯ ಹೇಮಲತಾ ತನ್ನಿಬ್ಬರು ಮಕ್ಕಳೊಂದಿಗೆ ಕಾರ ಹುಣ್ಣಿಮೆ ಪ್ರಯುಕ್ತ ತುಳಸಿಪುರ ಗ್ರಾಮ ವ್ಯಾಪ್ತಿಯಲ್ಲಿನ ತಮ್ಮ ಅಡಿಕೆ ತೋಟಕ್ಕೆ ಪೂಜೆಗೆ ತೆರಳಿದ್ದರು.
ಬೆಳಗ್ಗೆ 9 ಗಂಟೆಯಾದರೂ ಮನೆಗೆ ವಾಪಸ್ ಬಾರದ ಕಾರಣ ಪತಿ ಕುಮಾರ್ ತೋಟಕ್ಕೆ ಹೋಗಿ ನೋಡಿದಾಗ, ಜಮೀನಿನಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕಂಡು ಬಂದಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಶಹಾಪುರವಾಡ್ ಡಿವೈಎಸ್ಪಿ ಸಿಪಿಐ ಎಚ್.ಶ್ರೀನಿವಾಸ್ ಕೋರಾ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.