Sat,Apr27,2024
ಕನ್ನಡ / English

ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಮಲ ಲಕ್ಷ್ಮೀ ಸಂಕೇತ, ಟೀಕಿಸುವುದು ಬಿಟ್ಟು ಸಹಕರಿಸಿ: ಈಶ್ವರಪ್ಪ | ಜನತಾ ನ್ಯೂಸ್

24 Jun 2021
1387

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲ ನಕ್ಷೆ ಕಮಲದ ಮಾದರಿ ಇದೆ ಎಂದು ಕಾಂಗ್ರೆಸ್​ನವರು ಆರೋಪ ಮಾಡಿದ್ದರು. ಈ ಸಂಬಂಧ ಸಚಿವ ಕೆ.ಎಸ್​. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಕಮಲ ಎನ್ನುವುದು ಮಹಾಲಕ್ಷ್ಮಿಯ ಸಂಕೇತ. ಅದು ಕೇವಲ ಬಿಜೆಪಿ ಪಕ್ಷದ ಸ್ವತ್ತಲ್ಲ. ಟೀಕೆ ಮಾಡಲೆಂದೇ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ ಎಂದಿದ್ದಾರೆ.

ಅನೇಕ ವಿಚಾರಗಳಲ್ಲಿ ಸರ್ಕಾರ ಹಲವು ಯೋಚನೆಗಳನ್ನು ಮಾಡುತ್ತದೆ. ಹಲವು ರಾಜ್ಯಗಳಲ್ಲಿ ಅನೇಕ ಕಡೆ ಮಹಾಪುರುಷರ ಹೆಸರುಗಳನ್ನು ಇಡಲಾಗಿದೆ. ಇಂದಿರಾ ಗಾಂಧಿ, ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧಿ ಹೆಸರನ್ನು ಇಟ್ಟಿದ್ದಾರೆ. ಆ ಸಂದರ್ಭದಲ್ಲೂ ಸಹ ಹಲವರು ವಿರೋಧ ಮಾಡಿದ್ದರು ಎಂದರು.

ಯಡಿಯೂರಪ್ಪ ಅವರು ಸಿಎಂ ಆದ ಕೂಡಲೇ ಅದಕ್ಕೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಆದರೆ ಕಮಲದ ಮಾದರಿ ಇದೆ ಎಂದು ಕಾಂಗ್ರೆಸ್ಸಿಗರು ವಿರೋಧ ಮಾಡ್ತಿದ್ದಾರೆ. ಕಮಲವನ್ನು ಏನು ಬಿಜೆಪಿಗೆ ಗುತ್ತಿಗೆ ಕೊಟ್ಟಿದ್ದಾರೆಯೇ‌? ಕಮಲ ಮಹಾಲಕ್ಷ್ಮಿಯ ಒಂದು ಸಂಕೇತ. ಇದನ್ನೂ ಕೂಡ ಕಾಂಗ್ರೆಸ್ಸಿಗರು ವಿರೋಧ ಮಾಡ್ತಿದ್ದಾರೆ. ಇದಕ್ಕೆ ಅರ್ಥವೇ ಇಲ್ಲ ಎಂದು ಗುಡುಗಿದರು.

ಅಭಿವೃದ್ಧಿಯ ಕೆಲಸಗಳು ಅಗುವ ಸಮಯದಲ್ಲಿ ಸಹಕಾರ ಕೊಡಬೇಕು. ಅದನ್ನು ಬಿಟ್ಟು ಎಲ್ಲವನ್ನು ಟೀಕಿಸುವುದಲ್ಲ. ಈಡೀ ರಾಜ್ಯದಲ್ಲಿ ಕಾಂಗ್ರೆಸ್​ನ ವಿರೋಧವನ್ನು ನೋಡ್ತಾ ಇದ್ದೇವೆ. ರೇಷನ್, ವ್ಯಾಕ್ಸಿನ್ ಎಲ್ಲವನ್ನು ಟೀಕಿಸಿದ್ದಾರೆ. ಟೀಕೆ ಮಾಡೋಕೆ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ. ದೆಹಲಿಯಲ್ಲಿ ಅವರೇ ಕಟ್ಟಿಸಿದ ಲೋಟಸ್ ಮಹಲ್ ಇದೆ. ಹಾಗೆಂದು ಒಡೆದು ಹಾಕೋಕೆ ಆಗುತ್ತಾ? ಪ್ರತಿಯೊಂದಕ್ಕೂ ವಿರೋಧ ಮಾಡೋದು ಅರ್ಥವಿಲ್ಲದ್ದು, ಅದು ಸರಿಯಲ್ಲ. ಇಂತಹ ಟೀಕೆ ಮಾಡುವವರಿಗೆ ಕಾಂಗ್ರೆಸ್ ನಾಯಕರೇ ಬುದ್ದಿ ಹೇಳಬೇಕು ಎಂದು ಈಶ್ವರಪ್ಪ ಟೀಕಿಸಿದರು.

ಕಮಲದ ಚಿಹ್ನೆ ಬಿಜೆಪಿ ಪಕ್ಷದ ಸ್ವತ್ತೇ? ಕಾಂಗ್ರೆಸ್ಸಿಗರ ಮನೆಯಲ್ಲಿ ಪೂಜೆ ಮಾಡುವವುರು ದೇವರ ಮನೆಯಿಂದ ಕಮಲದ ಹೂವು ತೆಗೆಯುತ್ತಾರೆಯೋ ಎಂದು ಅವರ ತಾಯಿಗೋ, ತಂಗಿಗೋ, ಹೆಂಡತಿಗೋ ಕೇಳಲಿ. ಕಮಲದ ಯಾರದ್ದು ಅಲ್ಲ, ಹಸ್ತ ಕಾಂಗ್ರೆಸ್ ನ ಗುರುತು ಎಂದು ಕೈ ಮಾಡಲಾಗುತ್ತದೆಯೇ ಎಂದರು.

RELATED TOPICS:
English summary :Shivamogga: Lotus Design for Shivamogga Airport Leads to War of Words Between BJP, Congress in Karnataka

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...