Tue,Apr23,2024
ಕನ್ನಡ / English

"ಕನ್ನಡ, ಕನ್ನಡಿಗ, ಕರ್ನಾಟಕ"ದ ವಿಚಾರ: ವಿಶೇಷ ಅಧಿವೇಶನ ಕರೆಯುವಂತೆ ಸಿಎಂ ಹಾಗೂ ರಾಜ್ಯಪಾಲರಿಗೆ ಕುಮಾರಸ್ವಾಮಿ ಪತ್ರ | ಜನತಾ ನ್ಯೂಸ್

25 Jun 2021
1120

ಬೆಂಗಳೂರು : ಕೋವಿಡ್‌ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ "ಕನ್ನಡ, ಕನ್ನಡಿಗ, ಕರ್ನಾಟಕ"ದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ರಾಜ್ಯಪಾಲರು, ಮುಖ್ಯಮಂತ್ರಿ, ಹಾಗೂ ವಿಧಾನಸಭಾಧ್ಯಕ್ಷರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರಿಗೆ ಹಿನ್ನಡೆಗಳಾಗುತ್ತಿವೆ. ನಾವು ಹೋರಾಡುತ್ತಿರುವುದು, ರಾಜಕಾರಣ ಮಾಡುತ್ತಿರುವುದು, ಸರ್ಕಾರ ಮಾಡಬೇಕೆಂದಿರುವುದು ಕನ್ನಡಕ್ಕಾಗಿ, ಕರ್ನಾಟಕಕ್ಕಾಗಿ, ಕನ್ನಡಿಗರಿಗಾಗಿ. ಆದರೆ, ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕೆ ಹೆಚ್ಚು ಪೆಟ್ಟು ಬೀಳುತ್ತಿದೆ. ಕೇಂದ್ರದ ನೂತನ ಶಿಕ್ಷಣ ನೀತಿಯ ಅಡಿಯಲ್ಲಿ ನಾಲ್ಕು ವರ್ಷಗಳ ಪದವಿ ತರಗತಿಗಳಲ್ಲಿ ಕನ್ನಡ ಕಲಿಕೆಗೆ ಒಂದೇ ವರ್ಷದ ಆದ್ಯತೆ ನೀಡುವುದು, ಭಾಷೆಗಳ ಕಲಿಕಾ ತರಬೇತಿಯಲ್ಲಿ ಲೋಕಸಭೆಯೇ ಕನ್ನಡವನ್ನು ಕಡೆಗಣಿಸುವುದು, ಬ್ಯಾಂಕಿಂಗ್ ಸೇವೆಯಲ್ಲಿ ಕನ್ನಡದ ನಿರ್ಲಕ್ಷ್ಯ, ಕರ್ನಾಟಕದ ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡಿಗರಿಗೆ ಸ್ಥಾನವಿಲ್ಲದೇ ಇರುವುದು, ಅಂತರ್ಜಾಲದಲ್ಲಿ ಕನ್ನಡ-ಕನ್ನಡಿಗರಿಗೆ ಆಗಿರುವ ಅಪಮಾನ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ಸೋಂಕಿನಿಂದ ಹಲವು ಜೀವಹಾನಿ ಹಾಗೂ ಜೀವನವು ದುಸ್ತರವಾಗಿದೆ. ಆದರೆ ಜೀವಹಾನಿ, ಜನಜೀವನಕ್ಕಾದ ತೊಂದರೆಗೆ ಸರಕಾರ ನೀಡಿರುವ ಪರಿಹಾರ ಸೂಕ್ತವಾದುದ್ದಲ್ಲ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರದಲ್ಲಿ ತಾರತಮ್ಯ, ಜಿಪುಣತೆ ತೋರಲಾಗಿದೆ. ಅದೇರೀತಿ ಲಾಕ್ ಡೌನ್ ಪರಿಹಾರವಾಗಿ ಸರಕಾರ ಘೋಷಿಸಿರುವ ಪ್ಯಾಕೇಜ್ ಅತ್ಯಂತ ಅಲ್ಪ ಪ್ರಮಾಣದ್ದು. ಈ ಪ್ಯಾಕೇಜ್ ಘೋಷಣೆ ಮಾಡುವ ಮುನ್ನ ಸರ್ವಪಕ್ಷಗಳ ಅಭಿಪ್ರಾಯ ಕೇಳಬೇಕಿತ್ತು ಎಂದು ಕುಮಾರಸ್ವಾಮಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಲೇ ಇದೆ. ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಕಂಗಾಲಾಗಿದ್ದಾರೆ. ಲಾಕ್​ಡೌನ್​ ನಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ತಕರಾರು ತೆಗೆಯುತ್ತಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ಅಗತ್ಯವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಹದಗೆಟ್ಟಿದೆ, ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದೆ. ಜೊತೆಗೆ ರಾಜ್ಯದ ಕನ್ನಡಿಗರಿಗೆ ಹಲವರು ವಿಚಾರಗಳಲ್ಲಿ ಅನ್ಯಾಯ ಆಗುತ್ತಿದೆ. ಈ ಎಲ್ಲಾ ವಿಚಾರ ಕುರಿತು ಚರ್ಚೆ ನಡೆಸಬೇಕಾಗಿದೆ. ಹೀಗಾಗಿ ವಿಶೇಷ ಅಧಿವೇಶನ ಕರೆಯುವಂತೆ ಪತ್ರದ ಮೂಲಕ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಲಾಕ್‌ಡೌನ್‌ಗೆ ಪರಿಹಾರವಾಗಿ ಸರ್ಕಾರ ಘೋಷಿಸಿದ ಪ್ಯಾಕೇಜ್ ಅತ್ಯಂತ ಅಲ್ಪ ಪ್ರಮಾಣದ್ದು. ಸರ್ಕಾರ ಪ್ಯಾಕೇಜ್ ಘೋಷಣೆ ಮಾಡುವುದಕ್ಕೂ ಮೊದಲು ಸರ್ವ ಪಕ್ಷಗಳ ಅಭಿಪ್ರಾಯವನ್ನು ಒಮ್ಮೆ ಕೇಳಬೇಕಿತ್ತು. ರಾಜ್ಯದ 224 ಕ್ಷೇತ್ರಗಳ ಪ್ರತಿನಿಧಿಗಳ ಮಾತುಗಳನ್ನು ಕೇಳಬೇಕಿತ್ತು. ಆದರೆ, ಇದ್ಯಾವುದೂ ಆಗಿಲ್ಲ. ಅತ್ತ, ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರದಲ್ಲಿ ಸರ್ಕಾರ ತಾರತಮ್ಯ ಮತ್ತು ಜಿಪುಣತೆಗಳನ್ನು ಪ್ರದರ್ಶಿಸಿದೆ.

ಬಿಪಿಎಲ್ ಕಾರ್ಡುದಾರರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಅದರಲ್ಲಿಯೂ ಎಲ್ಲರಿಗೂ ನೀಡದೆ ಮಾನದಂಡಗಳನ್ನು ವಿಧಿಸುತ್ತಿದೆ. ಇದರ ಜತೆಗೆ, ಬಡ ಮಧ್ಯಮ ವರ್ಗವೂ ಆಶಕ್ತ ಸಮುದಾಯವೆ. ಅವರಿಗೂ ಪರಿಹಾರ ನೀಡಬೇಕಿತ್ತು. ಪರಿಹಾರದ ಮೊತ್ತ ಹೆಚ್ಚಾಗಬೇಕಿತ್ತು.

ಮೇಕೆದಾಟು ವಿಚಾರದ ಬಗ್ಗೆಯೂ ಈ ಹಿಂದೆ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ, "ಮೇಕೆದಾಟು ಡ್ಯಾಂಗೆ ಅನುಮತಿ ನೀಡಬಾರದೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ, ಯೋಜನೆ ತಡೆಯಲು ಪ್ರಧಾನಿ ಮೇಲೆ ಒತ್ತಡ ಹೇರುತ್ತಾ ಬಂದಿದ್ದಾಗಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು-ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಒತ್ತಡ ಹೇರಿತ್ತೇ? ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ? ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು. ಇಲ್ಲವೇ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಪ್ರಶ್ನೆ ಮಾಡಿ ಉತ್ತರ ಪಡೆದುಕೊಂಡು ಬರಬೇಕು. ಇಲ್ಲವೇ ಬಾಕಿ ಇರುವ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು" ಎಂದು ಒತ್ತಾಯಿಸಿದ್ದರು. ಇದೀಗ ಇದೇ ವಿಚಾರವಾಗಿ ಚರ್ಚೆ ನಡೆಸಲು ವಿಧಾನ ಮಂಡಲ ಅಧಿವೇಶನ ಕರೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸದ್ಯ ಮೂರನೇ ಅಲೆ ಬಾಗಿಲ ಬಳಿ ಬಂದು ನಿಂತಿದೆ. ಹಿಂದಿನ ವೈಫಲ್ಯಗಳು, ಮುಂದೆ ಆಗಬೇಕಾದ್ದನ್ನು ಸೂಕ್ತ ರೀತಿಯಿಂದ ಚರ್ಚಿಸಲು ಸಮರ್ಥವಾಗಿ ಮುಂದಡಿ ಇಡಲು ವಿಶೇಷ ಅಧಿವೇಶನ ಕರೆಯುವ ಅಗತ್ಯವಿದೆ. ಎಲ್ಲರ ಅಭಿಪ್ರಾಯವನ್ನು ಕೇಳಿ ಮುಂದುವರಿಯುವುದು ಪ್ರಜಾಸತ್ತಾತ್ಮಕ ಮಾರ್ಗವೂ ಹೌದು.

ನಮ್ಮ ಅಸ್ಮಿತೆಗೆ ಸಂಬಂಧಿಸಿದ ವಿಚಾರಗಳ ಕುರಿತು ವಿಧಾನಸಭೆಯಲ್ಲಿ ಮಾತುಕತೆಗಳು ನಡೆಯಬೇಕು. ಈ ಎಲ್ಲ ಕಾರಣಗಳಿಗಾಗಿ ತಾವು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ಪತ್ರದ ಮೂಲಕ ಕೋರಿದ್ದಾರೆ.

RELATED TOPICS:
English summary :HD Kumaraswamy

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...