ಮುಖ್ಯಮಂತ್ರಿ ಸ್ಥಾನ ಪತ್ರಾವಳಿ ಅಲ್ಲ, ಉಂಡು ಬಿಸಾಡೋದಲ್ಲ: ವಿಶ್ವನಾಥ್ | ಜನತಾ ನ್ಯೂಸ್
ಬೆಂಗಳೂರು : ಸಿಎಂ ಸ್ಥಾನ ಪತ್ರಾವಳಿ ಅಲ್ಲ, ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಚವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು, ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಡಿ.ಕೆ. ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು. ಅವರಿಗೆ ಅವಕಾಶ ಸಿಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಸಿಎಂ ಎಂಬ ಗೊಂದಲ ಸೃಷ್ಟಿಯಾಗಿದೆ. ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಶಿಷ್ಯಂದಿರು 150 ಸೀಟು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ 70ಕ್ಕೆ ಬಂದು ನಿಂತಿರಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯಗೆ ಕ್ಷೇತ್ರವೇ ಇಲ್ಲ. ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದು. ಅವರೇ ಸಿಎಂ ಎನ್ನಲು ಇದು "ಟೂ ಅರ್ಲಿ" ಎಂದು ಟೀಕಿಸಿದರು.
ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದಿದ್ದರೂ ಅವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಅವಕಾಶ ಕೊಟ್ಟಾಗಿದೆ. ಡಿ.ಕೆ.ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು. ಒಂದ್ ಸಲ ಸಿದ್ದರಾಮಯ್ಯಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇದ್ದಾರೆ. ಜಮೀರ್ನ ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯನವರೇ ಒಳ್ಳೆಯದಾಗಲ್ಲ ಎಂದರು.