ನಾವು ಕ್ವಾರಂಟೇನ್​​ನಲ್ಲಿಲ್ಲ, ಬೀದಿಗಿಳಿದು ಹೋರಾಟ ನಡೆಸುತ್ತಿದ್ದೇವೆ: ನಿಖಿಲ್ ಕುಮಾರಸ್ವಾಮಿ | ಜನತಾ ನ್ಯೂಸ್

26 Jun 2021
432

ಬೆಂಗಳೂರು : ನಾವು ಕ್ವಾರಂಟೇನ್​​ನಲ್ಲಿ ಇಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತಿದ್ದೇವೆ ಎಂದು ಜೆಡಿಎಸ್​​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾರ್ವಜನಿಕರ ಕಡೆಯಿಂದ ಒಂದಿಷ್ಟು ಸುದ್ದಿಗಳು ಬರುತ್ತವೆ‌. ತಂದೆಯಾಗುತ್ತಿರುವ ಸುದ್ದಿ ನಿಜವಾಗಿದೆ. ಅತಿ ಶೀಘ್ರದಲ್ಲೇ ಮಗು ನಿರೀಕ್ಷೆ ಮಾಡುತ್ತಿದ್ದೇನೆ. ನಿರೀಕ್ಷೆ ಅಂದ ಮೇಲೆ ತಂದೆ ಆಗಬೇಕಲ್ಲವೇ? ಎಂದು ಹಾಸ್ಯ ಚಟಾಕಿ ಹಾರಿಸಿದರು.

ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕಿತ್ತಾಟ ಆರಂಭವಾಗಿದೆ. ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ ಎಂದು ವ್ಯಂಗ್ಯವಾಡಿದರು.

ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ನಿತ್ಯಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ. ಇದನ್ನು ವಿರೋಧಿಸಿ ಸೋಮವಾರ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ನಿಖಿಲ್ ಹೇಳಿದರು.

ಜೂ.28 ರ ಸೋಮವಾರ ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್​​​ನಿಂದ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನಗರದ ಜೆಪಿ ಭವನದಲ್ಲಿ ಬೆಂಗಳೂರು ಜಿಲ್ಲೆಯ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆಯಲ್ಲಿ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಇ.ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED TOPICS:
English summary :Nikhil kumaraswamy

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...