Sat,Apr27,2024
ಕನ್ನಡ / English

ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್: ಸಚಿವರಿಗೆ ನೋಟಿಸ್ | ಜನತಾ ನ್ಯೂಸ್

26 Jun 2021
1964

ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ ಚೇತನ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ 1 ರೂ. ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

1 ರೂ. ಮಾನನಷ್ಟ ಪರಿಹಾರ ನೀಡಬೇಕು ಮತ್ತು ಬೇಷರತ್​ ಕ್ಷಮೆ ಯಾಚಿಸಬೇಕು ಎಂದು ಚೇತನ್​ ಮೊಕದ್ದಮೆ ಹೂಡಿದ್ದಾರೆ. ಈ ಸಂಬಂಧ ಸಿಟಿ ಸಿವಿಲ್​ ಸೆಷನ್ಸ್​ ಕೋರ್ಟ್​ನಿಂದ ಸಚಿವ ಶಿವರಾಮ್​ ಹೆಬ್ಬಾರ್​ಗೆ ನೋಟಿಸ್​ ಜಾರಿ ಮಾಡಲಾಗಿದೆ. ಜು.14ಕ್ಕೆ ವಿಚಾರಣೆ ನಡೆಯಲಿದೆ.

ತನ್ನ ವಿರುದ್ಧ ಸೋಷಿಯಲ್ ಮಿಡಿಯಾದಲ್ಲಿ ತೇಜೋವಧೆ ಮಾಡಿದ್ದಾರೆಂದು ಚೇತನ್ ಆರೋಪಿಸಿದ್ದಾರೆ. ಜೂ. 6 ರಂದು ಬ್ರಾಹ್ಮಣ್ಯದ ಕುರಿತಂತೆ ಚೇತನ್ ಟ್ವೀಟ್ ಮಾಡಿದ್ದರು. ಇದಕ್ಕೆ ಶಿವರಾಮ್ ಹೆಬ್ಬಾರ್ ಫೇಸ್ಬುಕ್​ನಲ್ಲಿ‌ ಹರಿಹಾಯ್ದಿದ್ದರು.

"ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ" ಎಂದು ಶಿವರಾಮ್​ ಹೆಬ್ಬಾರ್​ ಟ್ವೀಟ್​ ಮಾಡಿದ್ದರು.

RELATED TOPICS:
English summary :Chetan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...