ಸೊಸೆ ಬಂದು ಕೆಲವು ದಿನಕ್ಕೆ ಕೀಲಿಕೈ ಅವಳ ಕೈಗೆ ಸೇರುತ್ತದೆ, ಈಗ ಸಿದ್ದರಾಮಯ್ಯ ಕೈಗೆ ಕೀಲಿಕೈ ಸಿಕ್ಕಿದೆ | ಜನತಾ ನ್ಯೂಸ್

26 Jun 2021
506

ಬೆಂಗಳೂರು : ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಂಎಲ್ ಸಿ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮನೆಗೆ ಸೊಸೆ ಹೊಸದಾಗಿಯೇ ಬರುತ್ತಾಳೆ. ಅವಳಿಗೆ ನೀನು ವಲಸೆ ಬಂದವಳು ಎನ್ನಲಾಗದು. ಸೊಸೆ ಬಂದು ಕೆಲ ದಿನಕ್ಕೆ ಕೀಲಿಕೈ ಅವಳ ಕೈಗೆ ಹೋಗುತ್ತೆ. ಹಾಗೇ ಈಗ ಸಿದ್ದರಾಮಯ್ಯ ಕೈಗೆ ಕೀಲಿಕೈ ಸಿಕ್ಕಿದೆ. ವಲಸಿಗ, ಹೊಸಬ ಎನ್ನುವ ಜಟಾಪಟಿ ಮುಂದೆ ನಡೆಯಲ್ಲ ಎಂದು ಟಾಂಗ್ ನೀಡಿದ್ದಾರೆ.

ವಲಸಿಗ ಹೊಸಬ ಎಂಬ ಜಟಾಪಟಿ ಮುಂದೆ ನಡೆಯಲ್ಲ. ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಇವರನ್ನು ಮುಂದೆ ತಂದವರು ಯಾರು? ಅವರು ಸಿಎಂ ಆಗಬೇಕೆಂದು ನಾವೇ ಹೇಳಿದ್ದು ಅಲ್ಲವಾ? ಇಂಥವರೊಬ್ಬರು ಇದ್ದಾರೆ ಅಂತ ಹೇಳಿದ್ದೇ ನಾವು. ಸಿದ್ದರಾಮಯ್ಯ ಅವರಿಗೆ ಮೇಕಪ್ ಮಾಡಿದವರೇ ನಾವು ಎಂದು ಮಾಜಿ ಸಚಿವರೂ ಆಗಿರುವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಂತ ಹೇಳಿದ್ಯಾರು? ಅವರು ಹೀರೋ ಇದ್ದರೂ ಹಿನ್ನೆಲೆ ಗಾಯಕರು ಯಾರು? ಸ್ವಲ್ಪ ಕ್ಯಾಸೆಟ್ ತೆಗೆದು ನೋಡಿ, ಹಿನ್ನೆಲೆ ಗಾಯಕ ಕಾಣಿಸಲ್ಲ. 1ರೂ.ಗೆ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ಆ ಯೋಜನೆಯನ್ನು ತಮಿಳುನಾಡಿನಲ್ಲಿ ಕುಳಿತು ಅಧ್ಯಯನ ಮಾಡಿ ನಾನು ಪರಿಚಯಿಸಿದ್ದೆ. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆ ಕೊಟ್ಟಿದ್ದೆ. ಆ ಯೋಜನೆ ಸಕ್ಸಸ್ ಆಯಿತು ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್‌ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್‌ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.

ರಾಷ್ಟ್ರೀಯ ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಶೇ. 90ರಷ್ಟು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ಹೈಕಮಾಂಡ್ ಈ ವಿಚಾರದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ ಎಂದು ಪ್ರತಿಕ್ರಿಯಿಸಿದರು.

ಇನ್ನು, ಯಡಿಯೂರಪ್ಪ ಮತ್ತು ಬಿಜೆಪಿ ಬಗ್ಗೆ ಇಬ್ರಾಹಿಂ ತಮ್ಮದೇ ರೀತಿಯಲ್ಲಿ ಕುಟುಕಿದರು. ಸಿದ್ದರಾಮಯ್ಯಗೆ ಒಂದು ತಂಡ ಸಿಕ್ಕಿತು. ಆದರೆ ಯಡಿಯೂರಪ್ಪಗೆ ಅಂಥ ಟೀಮ್ ಸಿಗಲಿಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೇ ಟೀಮ್. ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಯಡಿಯೂರಪ್ಪ ಬಿಟ್ಟು ಹೋದರೆ ಬಿಜೆಪಿಗೆ ಬರೋದು ಕೇವಲ 40 ಸೀಟು ಮಾತ್ರ ಎಂದು ಸಿ.ಎಂ. ಇಬ್ರಾಹಿಂ ವ್ಯಂಗ್ಯ ಮಾಡಿದರು

RELATED TOPICS:
English summary :Siddaramaiah

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...