ಕಾಸರಗೋಡಿನ ಗ್ರಾಮಗಳ ಹೆಸರುಗಳ ಮಲೆಯಾಳೀಕರಣ: ಎಚ್ಡಿಕೆ ಬೇಸರ | ಜನತಾ ನ್ಯೂಸ್

27 Jun 2021
407

ಬೆಂಗಳೂರು : ಕಾಸರಗೋಡಿನ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳಿಗೆ ಮಲೆಯಾಳಿ ಹೆಸರಿಡಲು ಮುಂದಾಗಿರುವ ಕೇರಳ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿರುವುದು ಹೀಗೆ,"ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ".

"ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ.ಅಲ್ಲಿನ ಜನರೊಂದಿಗೆ ಕರ್ನಾಟಕ & ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ,ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ & ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಬೇಸರ ವ್ಯಕ್ತ ಪಡಿಸಿದ್ದಾರೆ.

"ಹೀಗಾಗಿ, ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ" ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೇಯೇ ಉಳಿಸಬೇಕು ಎಂದು ಕೇರಳ ಸರ್ಕಾರಕ್ಕೆ ಈ ಮೂಲಕ ವಿನಂತಿ ಮಾಡುತ್ತೇನೆ ಎಂದು ಎಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

RELATED TOPICS:
English summary :HD Kumaraswamy

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...