Fri,Apr26,2024
ಕನ್ನಡ / English

ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ, ವಿಜ್ಞಾನಿಗಳನ್ನು ನಂಬಿ ಲಸಿಕೆ ಹಾಕಿಸಿಕೊಳ್ಳಿ - ಮನ್-ಕಿ-ಬಾತ್ ನಲ್ಲಿ ಪ್ರಧಾನಿ ಮೋದಿ | ಜನತಾ ನ್ಯೂಸ್

27 Jun 2021
1286

ನವದೆಹಲಿ : ಲಸಿಕೆ ಪಡೆಯುವಲ್ಲಿನ ಹಿಂಜರಿಕೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ಜನತೆಯನ್ನು ಒತ್ತಾಯಿಸಿದ್ದಾರೆ. ತಮ್ಮ ತೊಂಬತ್ತರ ಹರೆಯದ ತಾಯಿ ಸಹ ಕೋವಿಡ್ ನಿರೋಧಕ ಲಸಿಕೆಗಳನ್ನು ತೆಗೆದುಕೊಂಡಿದ್ದಾರೆ, ಎಂದು ಒತ್ತಿಹೇಳಿದ ಪ್ರಧಾನಿ ಮೋದಿಯವರು ಲಸಿಕೆಗೆ ಸಂಬಂಧಿಸಿದ ವದಂತಿಗಳನ್ನು ನಂಬಬೇಡಿ ಎಂದು ಅವರು ಜನರನ್ನು ವಿನಂತಿಸಿಕೊಂಡಿದ್ದಾರೆ. ಅಲ್ಲದೇ, ಲಸಿಕೆ ಹಾಕಿಸಿಕೊಳ್ಳುವ ಮೂಲಕ ಮಾತ್ರ ಮಾರಣಾಂತಿಕ ಕಾಯಿಲೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

"ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ - ವಿಜ್ಞಾನವನ್ನು ನಂಬಿರಿ. ನಮ್ಮ ವಿಜ್ಞಾನಿಗಳನ್ನು ನಂಬಿರಿ. ಎಷ್ಟೋ ಜನರು ಲಸಿಕೆ ತೆಗೆದುಕೊಂಡಿದ್ದಾರೆ. ನಾನು ಎರಡೂ ಡೋಸ್ ಗಳನ್ನು ತೆಗೆದುಕೊಂಡಿದ್ದೇನೆ. ನನ್ನ ತಾಯಿಗೆ ಸುಮಾರು ನೂರು ವರ್ಷ, ಅವಳು ಎರಡೂ ಲಸಿಕೆಗಳನ್ನು ಸಹ ತೆಗೆದುಕೊಂಡಿದ್ದಾಳೆ. ದಯವಿಟ್ಟು ಲಸಿಕೆಗಳು ಇದಕ್ಕೆ ಸಂಬಂಧಿಸಿದ ಯಾವುದೇ ವದಂತಿಗಳನ್ನು ನಂಬಬೇಡಿ. ಲಸಿಕೆಗೆ ಸಂಬಂಧಿಸಿದ ವದಂತಿಗಳನ್ನು ನಾವು ಎಂದಿಗೂ ನಂಬಬಾರದು" ಎಂದು ಪ್ರಧಾನಿ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮವಾದ "ಮನ್-ಕಿ-ಬಾತ್"ನ 78ನೇ ಆವೃತ್ತಿಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.

ಲಸಿಕೆ ಬಗ್ಗೆ ವದಂತಿಗಳ ಹಿನ್ನೆಲೆಯಲ್ಲಿ ಜನರಲ್ಲಿರುವ ಲಸಿಕೆ ಹಿಂಜರಿಕೆಯ ಬಗ್ಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಗ್ರಾಮಸ್ಥರು ತಿಳಿಸಿದ್ದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, "ಲಸಿಕೆಗಳ ಬಗ್ಗೆ ವದಂತಿಗಳನ್ನು ಹರಡುವವರು, ಅವರು ಹಾಗೆ ಮಾಡುತ್ತಲಿರಲಿ. ನಾವೆಲ್ಲರೂ ನಮ್ಮ ಕೆಲಸವನ್ನು ಮಾಡೋಣ ಮತ್ತು ನಮ್ಮ ಸುತ್ತಮುತ್ತಲಿನ ಜನರಿಗೆ ಲಸಿಕೆ ಹಾಕುವಂತೆ ನೋಡಿಕೊಳ್ಳೋಣ. ಕೋವಿಡ್-19 ಬೆದರಿಕೆ ಹಾಗೆ ಉಳಿದಿದೆ ಮತ್ತು ನಾವು ಲಸಿಕಾಕರಣದ ಬಗ್ಗೆ ಗಮನಹರಿಸಬೇಕು ಮತ್ತು ಕೋವಿಡ್-19 ನಿಯಮಾವಳಿಗಳನ್ನು ಅನುಸರಿಸಬೇಕು," ಎಂದು ಗ್ರಾಮಸ್ಥರು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕಳೆದ ವಾರ ಕೋವಿಡ್-19 ನಂತರದ ತೊಂದರೆಯ ಕಾರಣದಿಂದಾಗಿ ನಿಧನರಾದ ಓಟದ ದಂತಕಥೆ ಮಿಲ್ಖಾ ಸಿಂಗ್ ಅವರ ಕೊಡುಗೆಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿಯವರು ದಿವಂಗತ ಸಿಂಗ್ ಅವರಿಗೆ ಗೌರವ ಸಲ್ಲಿಸಿದರು. ಮಾಜಿ ರಾಷ್ಟ್ರೀಯ ವಾಲಿಬಾಲ್ ನಾಯಕಿ ಹಾಗೂ ಸಿಂಗ್ ಅವರ ಪತ್ನಿ ನಿರ್ಮಲ್ ಕೌರ್ ಸಹ ಕೆಲವೇ ದಿನಗಳ ಅಂತರದಲ್ಲಿ ಕೋವಿಡ್ ಕಾರಣ ನಿಧನರಾಗಿದ್ದರು.

ಒಲಿಂಪಿಕ್ಸ್‌ ಗೆ ಸಂಬಂಧಪಟ್ಟ ಭಾರತೀಯ ಕ್ರೀಡಾಪಟುಗಳ ಹೋರಾಟಗಳು ಮತ್ತು ವಿಜಯಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, ಜನರು ಸಾಮಾಜಿಕ ಮಾಧ್ಯಮದಲ್ಲಿ #ಚೀರ್4ಇಂಡಿಯಾ ಹ್ಯಾಶ್‌ಟ್ಯಾಗ್ ಮೂಲಕ ಅವರನ್ನು ಬೆಂಬಲಿಸಬಹುದು, ಎಂದು ಕರೆನೀಡಿದರು. “ಟೋಕಿಯೊಗೆ ಹೋಗುವ ಪ್ರತಿಯೊಬ್ಬ ಕ್ರೀಡಾಪಟು ಪರಿಶ್ರಮಿಸಿದ್ದಾರೆ. ಹೃದಯಗಳನ್ನು ಗೆಲ್ಲಲು ಅವರು ಅಲ್ಲಿಗೆ ಹೋಗುತ್ತಿದ್ದಾರೆ. ನಮ್ಮ ತಂಡವನ್ನು ಬೆಂಬಲಿಸುವುದು ನಮ್ಮ ಪ್ರಯತ್ನವಾಗಿರಬೇಕು ಮತ್ತು ತಂಡದ ಮೇಲೆ ಒತ್ತಡ ಹೇರಬಾರದು” ಎಂದು ಅವರು ಹೇಳಿದರು.

RELATED TOPICS:
English summary :Do not listen to rumors, trust scientists and get vaccinated - PM Modi in Man Ki Baat

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...