ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ: ಸ್ವಂತ ಅತ್ತಿಗೆಯನ್ನೇ ಕೊಂದ ಮಾಲ? | ಜನತಾ ನ್ಯೂಸ್

28 Jun 2021
480

ಬೆಂಗಳೂರು : ರಾಜಕೀಯ ಹಿಡಿತ ಸಾಧಿಸಲು ರೇಖಾ ಕೊಲೆ ಮಾಡಿಸಿರೋದನ್ನ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಬಡ ಜನರಿಗೆ ಊಟ ವಿತರಿಸುತ್ತಿರುವಾಗಲೇ ಜೂ.24ರಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ನನ್ನು ಅವರ ಕಚೇರಿ ಬಳಿಯೇ ಅಟ್ಟಾಡಿಸಿ ಕೊಂದ ಪೀಟರ್ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

2018ರಲ್ಲಿ ಕದಿರೇಶ್ ಹತ್ಯೆ ಮಾಡಿದ್ದ ಶೋಭನ್ ಗ್ಯಾಂಗ್​ಗೆ ರೇಖಾ ನೆರವು ನೀಡಿದ್ದಳು. ಇದೇ ವಿಚಾರಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾಗಿ ಪ್ರಮುಖ ಆರೋಪಿ ಪೀಟರ್ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಕದಿರೇಶ್ ಜತೆ ಓಡಾಡಿಕೊಂಡಿದ್ದ ಪೀಟರ್​ಗೆ ಯಾವುದಕ್ಕೂ ಕೊರತೆ ಇರಲಿಲ್ಲ. ಕದಿರೇಶ್ ಹತ್ಯೆಯಾದ ಬೆನ್ನಲ್ಲೇ ರೇಖಾ ಯಾವುದೇ ನೆರವನ್ನು ನೀಡದೆ ಪೀಟರ್​ನನ್ನು ದೂರ ಇಟ್ಟಿದ್ದಳು. ಜೀವನ ನಿರ್ವಹಣೆಗೂ ಕಷ್ಟವಾದಾಗ ರೇಖಾ ಮೇಲೆ ಆಕ್ರೋಶಗೊಂಡಿದ್ದ. ಅದನ್ನು ತಿಳಿದಿದ್ದ ಕದಿರೇಶ್ ಅಕ್ಕ ಮಾಲಾ ಹಾಗೂ ಇತರರು ಪೀಟರ್​ನನ್ನು ದಾಳವಾಗಿ ಬಳಸಿಕೊಂಡು ತಮ್ಮ ದಾರಿಗೆ ಅಡ್ಡವಾಗಿದ್ದ ರೇಖಾಳನ್ನು ಮುಗಿಸಲು ಆತನಿಗೆ ಆಮಿಷವೊಡ್ಡುತ್ತಿದ್ದರು.

ಜೊತೆಗೆ ಆಡಳಿತ ಹಾಗೂ ಉಳಿದ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿದ್ದ ಕದಿರೇಶ್, ಅಕ್ಕ, ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು. ಕದಿರೇಶ್ ಕೊಲೆಯಾದ ನಂತರ ರೇಖಾ, ಪತಿ ಮನೆಯವರನ್ನು ದೂರವಿಟ್ಟಿದ್ದರು. ಕದಿರೇಶ್ ಆಸ್ತಿಯನ್ನು ರೇಖಾ ಮಾತ್ರ ಅನುಭವಿಸುತ್ತಿದ್ದಾರೆಂಬ ಕಾರಣಕ್ಕೆ ಮಾಲಾ ಗಲಾಟೆ ಮಾಡುತ್ತಿದ್ದಳು. ಇತ್ತೀಚೆಗೆ ಮಾಲಾ ಸಂಬಂಧಿಯೊಬ್ಬರ ಕಪಾಳಕ್ಕೆ ರೇಖಾ ಹೊಡೆದಿದ್ದರು. ಇದು ವೈಷಮ್ಯಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಮುಂಬರುವ ಬಿಬಿಎಂಪಿ ಚುನಾವಣೆಗೆ ನಿಲ್ಲಲು ರೇಖಾ ಕದಿರೇಶ್ ಸಿದ್ಧವಾಗಿದ್ದರು. ಈ ಬಾರಿಯೂ ಬಿಜೆಪಿಯಿಂದಲೇ ರೇಖಾಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿತ್ತು. ಇತ್ತ ಮಾಲಾ ಬಿಎಸ್​ಪಿಯಿಂದ ಚುನಾವಣೆ ಸ್ಪರ್ಧಿಸಲು ಚಿಂತಿಸಿದ್ದಳು. ತನಗೆ ಆಗದಿದ್ದರೆ ಮಗಳು ಕಸ್ತೂರಿ ಅಥವಾ ಅರುಳ್ ಪತ್ನಿ ಪೂರ್ಣಿಮಾಳನ್ನು ನಿಲ್ಲಿಸಲು ತಯಾರಿ ಮಾಡಿದ್ದಳು.

ಆದರೆ ಏರಿಯಾದಲ್ಲಿ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿದ್ದ ರೇಖಾ ಮೀರಿ ಚುನಾವಣೆಗೆ ನಿಲ್ಲೋದು ಕಷ್ಟದ ಮಾತಾಗಿತ್ತು. ಹಾಗಾಗಿ ರೇಖಾ ಜೊತೆಗೇ ಇದ್ದ ಪೀಟರ್ ಬಳಸಿ ರೇಖಾ ಕಥೆಯನ್ನೇ ಮುಗಿಸೋ ಪ್ಲ್ಯಾನ್ ಮಾಡಿಕೊಂಡಿದ್ರು.

ಪ್ರಮುಖ ಆರೋಪಿ ಪೀಟರ್ ಹಾಗೂ ಸೂರ್ಯನ ಜತೆ ಸೇರಿ ರೇಖಾ ಕೊಲೆಗೆ ಒಳಸಂಚು ರೂಪಿಸಿದ್ದರು. ಹತ್ಯೆಯಲ್ಲಿ ಮಾಲಾ ಹಾಗೂ ಈಕೆಯ ಪುತ್ರ ಅರುಳ್ ಭಾಗಿಯಾಗಿರುವುದು ತನಿಖೆಯಲಿ ದೃಢಪಟ್ಟಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ರೇಖಾ ಹತ್ಯೆಗೆ ಕೇವಲ ರಾಜಕೀಯ ಕಾರಣನಾ? ಅಥವಾ ಬೇರೇನಾದ್ರೂ ಕಾರಣಗಳಿವೆಯಾ ಅಂತಾ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

RELATED TOPICS:
English summary :Rekha Kadiresh

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...