Thu,Apr25,2024
ಕನ್ನಡ / English

ಕೊರೊನಾ ವೇಳೆ ರಾಜ್ಯದಲ್ಲಿ 4 ಸಾವಿರ ವೈದ್ಯರ ನೇಮಕ: ಆರೋಗ್ಯ ಸಚಿವ ಸುಧಾಕರ್ | ಜನತಾ ನ್ಯೂಸ್

28 Jun 2021
1674

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ.

ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನ ನೇಮಿಸಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಒಂದು ವರ್ಷ ಸೇವೆ ಸಲ್ಲಿಸುವ ಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. 1,001 ವೈದ್ಯರನ್ನು 18 ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಗುತ್ತಿಗೆ ನೇಮಕ ಮಾಡಲಾಗಿದೆ.

ಆರೋಗ್ಯ ಇಲಾಖೆಯ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡಲು 666 ವೈದ್ಯರನ್ನು ನೇಮಕ ಮಾಡಲಾಗಿದೆ. ಜೂನ್ 30 ರೊಳಗೆ ಅವರೆಲ್ಲರೂ ಸ್ಥಳಕ್ಕೆ ಹೋಗಿ ಕೆಲಸ ಆರಂಭಿಸಲಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 348 ವೈದ್ಯರ ಹುದ್ದೆ ತುಂಬಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 90, ನೆಫ್ರೋ ಯುರಾಲಜಿಯಲ್ಲಿ 3 ವೈದ್ಯರನ್ನು ನೇಮಿಸಲಾಗಿದೆ. ಒಟ್ಟು 2,108 ಖಾಲಿ ಹುದ್ದೆ ಇದ್ದು, 2,053 ವೈದ್ಯರು ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆಸಿದ ನೇರ ನೇಮಕವೂ ಸೇರಿ ಒಟ್ಟು ನಾಲ್ಕು ಸಾವಿರದಷ್ಟು ವೈದ್ಯರ ನೇಮಕ ನಡೆದಿದೆ. ಇದು ಐತಿಹಾಸಿಕವಾದ ಪ್ರಕಿಯೆ ಎಂದರು.

ಪ್ರತಿನಿತ್ಯ ಒಂದೂವರೆ ಲಕ್ಷ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ. ಕಳೆದ 2 ದಿನಗಳಿಂದ 11 ಜಿಲ್ಲೆಗಳಲ್ಲಿ ಕೊವಿಡ್​ನಿಂದ ಸಾವಾಗಿಲ್ಲ. ಡಾ.ರೆಡ್ಡೀಸ್ ಲ್ಯಾಬ್‌ನಿಂದ 2ಜಿ ಔಷಧ ಬಿಡುಗಡೆಯಾಗಿದೆ. ಈ ಔಷಧವನ್ನು ಖರೀದಿ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 3ನೇ ಅಲೆ ವೇಳೆಗೆ ಅಗತ್ಯ ಪ್ರಮಾಣದ ಔಷಧ ಖರೀದಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಕೊವಿಡ್ 3ನೇ ಅಲೆ ನಿರ್ವಹಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಪ್ರತ್ಯೇಕ ಹೊಸ ಸಮಿತಿ ರಚಿಸಲಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

RELATED TOPICS:
English summary :Sudhakar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...