ಮಾಸಿಕ ₹5ಲಕ್ಷ ವೇತನ ಪಡೆದು,₹2.75 ಲಕ್ಷ ತೆರಿಗೆ ಕಟ್ಟುವೆ: ರಾಷ್ಟ್ರಪತಿ ಕೋವಿಂದ್‌ | ಜನತಾ ನ್ಯೂಸ್

28 Jun 2021
460

ನವದೆಹಲಿ: : ದೇಶದ ನಾಗರೀಕರು ತಪ್ಪದೆ ತೆರಿಗೆ ಕಟ್ಟಬೇಕು, ಇದರಿಂದ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ತಿಳಿಸಿದರು.

ಉತ್ತರ ಪ್ರದೇಶಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದ ಅವರು, ಜಿಂಜಾಕ್ ರೈಲ್ವೇ ನಿಲ್ದಾಣದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ನನಗೆ ಮಾಸಿಕ ₹5ಲಕ್ಷ ಸಂಬಳ ಸಿಗುತ್ತದೆ ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಅಂದರೆ ₹2.75ಲಕ್ಷ ತೆರಿಗೆಗೆ ಹೋಗುತ್ತದೆ. ನಾನು ಉಳಿಸಬಹುದಾಗಿದ್ದಕ್ಕಿಂತಲೂ ಹೆಚ್ಚು ಮೊತ್ತವನ್ನು ಬೇರೆ ಅಧಿಕಾರಿಗಳು, ಶಿಕ್ಷಕರು ಉಳಿಸುತ್ತಾರೆ ಎಂದು ತಮಾಷೆ ಮಾಡುತ್ತಲೇ ತೆರಿಗೆಯ ಮಹತ್ವವನ್ನು ವಿವರಿಸಿದರು.

ನಾವು-ನೀವು ತೆರಿಗೆ ಪಾವತಿಸಿದರೆ ಮಾತ್ರ ದೇಶದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲು ಸಾಧ್ಯ ಎಂದು ಹೇಳುವ ಸಲುವಾಗಿ ಇಲ್ಲಿ ವೇತನದ ವಿಷಯವನ್ನು ಪ್ರಸ್ತಾಪ ಮಾಡಿದೆ ಎಂದು ರಾಮನಾಥ್‌ ಕೋವಿಂದ್‌ ಹೇಳಿದರು.

ಕೆಲವೊಮ್ಮೆ ಜನರು ಸಿಟ್ಟಿನಲ್ಲಿ ರೈಲಿಗೆ ಕಲ್ಲು ಹೊಡೆಯುವುದು ಅಥವಾ ಬೆಂಕಿ ಹಚ್ಚುವುದು ಮಾಡುತ್ತಾರೆ. ಹಾಗೆ ಮಾಡಿದರೆ ಯಾರಿಗೆ ನಷ್ಟ? ಸರ್ಕಾರದ ಆಸ್ತಿ ಅದು ಎಂದು ಹೇಳಬಹುದು. ಆದರೆ, ಅದು ತೆರಿಗೆದಾರರ ಹಣ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ರಾಷ್ಟ್ರಪತಿ ಹುದ್ದೆಯಲ್ಲಿರುವವರಿಗೆ ಅತಿ ಹೆಚ್ಚು ಸಂಬಳ ಬರುತ್ತದೆ ಎಂದು ಎಲ್ಲರಿಗೂ ಗೊತ್ತು. ನನಗೀಗ ಮಾಸಿಕ ₹5ಲಕ್ಷ ಸಂಬಳ ಬರುತ್ತದೆ. ಆದರೆ, ಅದರಲ್ಲಿ ₹2.75ಲಕ್ಷ ಪ್ರತಿ ತಿಂಗಳು ತೆರಿಗೆಗೆ ಹೋಗುತ್ತದೆ. ನಾನು ₹5ಲಕ್ಷ ಪಡೆಯುತ್ತೇನೆ ಎನ್ನುವುದನ್ನು ಮಾತ್ರ ಎಲ್ಲರೂ ಗಮನಿಸುತ್ತಾರೆ. ನೆನಪಿರಲಿ, ನಾನು ಅದರಲ್ಲಿ ತೆರಿಗೆಯನ್ನೂ ಕಟ್ಟುತ್ತೇನೆ ಎಂದು ಹೇಳಿದರು.

RELATED TOPICS:
English summary :I Get ₹ 5 Lakh A Month, Pay More Than 50% In Taxes: President Kovind

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...